ಮಂಗಳವಾರ, ಮೇ 24, 2022
30 °C

ಗಂಗೋತ್ರಿ, ಯಮುನೋತ್ರಿ ದೇವಸ್ಥಾನಗಳಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಡೆಹ್ರಾಡೂನ್: ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ಮತ್ತು ಯಮುನೋತ್ರಿ ದೇವಸ್ಥಾನಗಳು ಭಕ್ತರಿಗೆ ತೆರೆದಿದ್ದು, ಚಾರ್‌ಧಾಮ್‌ ಯಾತ್ರೆ ಮಂಗಳವಾರ ಆರಂಭಗೊಂಡಿದೆ.

ಸಾವಿರಾರು ಭಕ್ತರ ಸಮ್ಮುಖದಲ್ಲಿ ಗಂಗೋತ್ರಿ ಮತ್ತು ಯಮುನೋತ್ರಿ ಪ್ರವೇಶ ದ್ವಾರವನ್ನು ತೆರೆಯಲಾಯಿತು ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

2019ರ ಬಳಿಕ ಕೋವಿಡ್‌ ನಿರ್ಬಂಧ ಇಲ್ಲದೆ ಯಾತ್ರೆ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. ಆದರೂ ದಿನನಿತ್ಯದ ಭೇಟಿ ನೀಡುವ ಯಾತ್ರಿಕರ ಸಂಖ್ಯೆಯನ್ನು ಮಿತಿಗೊಳಿಸಲಾಗಿದೆ. ಗಂಗೋತ್ರಿಗೆ 7,000, ಯಮುನೋತ್ರಿಗೆ 4,000, ಕೇದರನಾಥಕ್ಕೆ 12,000 ಮತ್ತು ಬದರಿನಾಥಕ್ಕೆ 15,000 ಯಾತ್ರಿಕರ ಸಂಖ್ಯೆಯನ್ನು ಮಿತಿಗೊಳಿಸಲಾಗಿದೆ.

ಗಂಗೋತ್ರಿ ಮತ್ತು ಯಮುನೋತ್ರಿ ಆರಂಭದೊಂದಿಗೆ ಚಾರ್‌ಧಾಮ್‌ ಯಾತ್ರೆಗೆ ಚಾಲನೆ ದೊರೆತಿದ್ದು, ಮೇ 6ಕ್ಕೆ ಕೇದರನಾಥ ಮತ್ತು ಮೇ 8ಕ್ಕೆ ಬದರಿನಾಥ ದೇವಸ್ಥಾನಗಳು ತೆರೆಯಲಿವೆ.

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಅವರು ತಮ್ಮ ಪತ್ನಿಯೊಂದಿಗೆ ಗಂಗೋತ್ರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು