ಶನಿವಾರ, ಮೇ 28, 2022
31 °C

Punjab| ಸಿಎಂ ಅಭ್ಯರ್ಥಿ ಘೋಷಿಸಿ: ವೇದಿಕೆಯಲ್ಲೇ ರಾಹುಲ್‌ಗೆ ಮನವಿ ಮಾಡಿದ ಚನ್ನಿ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಚಂಡೀಗಢ: ಪಂಜಾಬ್‌ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವಂತೆ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ವೇದಿಕೆಯಲ್ಲೇ ಮನವಿ ಮಾಡಿದರು.

‘ಪಂಜಾಬ್‌ನಲ್ಲಿ ನಡೆದ ಚುನಾವಣಾ ಪ್ರಚಾರದ ವರ್ಚುವಲ್‌ ರ್‍ಯಾಲಿಯಲ್ಲಿ ಭಾಷಣ ಮಾಡುತ್ತಿದ್ದ ಚನ್ನಿ, ‘ ನಮ್ಮ ನಡುವೆ ಯಾವುದೇ ಜಗಳವಿಲ್ಲ. ಪಂಜಾಬ್ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿ. ನಾವೆಲ್ಲ ಒಗ್ಗಟ್ಟಾಗಿ ನಿಲ್ಲುತ್ತೇವೆ’ ಎಂದು ಹೇಳಿದರು.

ಅಲ್ಲದೆ, ಭಾಷಣ ಮಾಡುತ್ತಲೇ ತಾವಿರುವ ಜಾಗಕ್ಕೆ ನವಜೋತ್‌ ಸಿಂಗ್‌ ಸಿಧು ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಆಹ್ವಾನಿಸಿದ ಚನ್ನಿ ಅವರನ್ನೆಲ್ಲ ತಬ್ಬಿ ಒಗ್ಗಟ್ಟು ಪ್ರದರ್ಶಿಸಿದರು.

ನಂತರ ಮಾತನಾಡಿದ ರಾಹುಲ್‌ ಗಾಂಧಿ, ‘ಪಂಜಾಬ್‌ನ ಕಾಂಗ್ರೆಸ್‌ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಾಗುವುದು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು