ಗುರುವಾರ , ಅಕ್ಟೋಬರ್ 21, 2021
29 °C
ಚನ್ನಿ ಅವರ ಮೇಲಿದೆ ಮೀಟೂ ಆರೋಪ

ಚರಣ್‌ಜಿತ್‌ ಸಿಂಗ್‌ ಚನ್ನಿ: ಪಂಜಾಬ್‌ನ ಮೊದಲ ದಲಿತ ಮುಖ್ಯಮಂತ್ರಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

PTI

ಚಂಡೀಗಡ: ತಾಂತ್ರಿಕ ಶಿಕ್ಷಣ ಸಚಿವರಾಗಿದ್ದ 58 ವರ್ಷದ ಚರಣ್‌ಜಿತ್‌ ಸಿಂಗ್‌ ಚನ್ನಿ ಅವರು ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಪಂಜಾಬ್‌ನ ಚುಕ್ಕಾಣಿ ದಲಿತ ಸಮುದಾಯದ ನಾಯಕರಿಗೆ ಸಿಕ್ಕಿದೆ. ಸೋಮವಾರ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿಗೆ ಸೇರಿದ ನಾಯಕರನ್ನು ಮುಖ್ಯಮಂತ್ರಿಯಾಗಿ ಘೋಷಣೆ ಮಾಡಿದೆ. ಚನ್ನಿ ಅವರು ರಾಮ್‌ದಾಸಿಯಾ(ಚಮಾರ್‌) ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಚಮಕೌರ್‌ ಸಾಹಿಬ್‌ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುವ ಚನ್ನಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2015-16ರಲ್ಲಿ ಚನ್ನಿ ಅವರು ಪಂಜಾಬ್‌ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿದ್ದರು. ಮಾರ್ಚ್‌ 2017ರಲ್ಲಿ ಸಿಎಂ ಅಮರಿಂದರ್‌ ಸಿಂಗ್‌ ಸಂಪುಟಕ್ಕೆ ಸೇರುವ ಮೂಲಕ ಮೊದಲ ಬಾರಿಗೆ ಸಚಿವರಾಗಿ ಆಯ್ಕೆಯಾದರು.

ಪಂಜಾಬ್‌ ವಿಧಾನಸಭೆಗೆ ಕೇವಲ ಒಂದು ತಿಂಗಳು ಬಾಕಿ ಇರುವಂತೆ ನಡೆದ ದಿಢೀರ್ ಬೆಳವಣಿಗೆಯಲ್ಲಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಬಳಿಕ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕಸರತ್ತು ರಾಷ್ಟ್ರದ ಗಮನ ಸೆಳೆದಿತ್ತು. ಕೊನೆಯ ವರೆಗೆ ಸುಖ್‌ಜಿಂದರ್‌ ಸಿಂಗ್‌ ರಂಧಾವಾ ಅವರೇ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನಲಾಗಿತ್ತು. 

ಚನ್ನಿ ಮೀಟೂ ವಿವಾದ
2018ರಲ್ಲಿ ಐಎಎಸ್‌ ಮಹಿಳಾ ಅಧಿಕಾರಿ ಒಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಆರೋಪವು ಚನ್ನಿ ಅವರ ಮೇಲಿದೆ. ರಾಷ್ಟ್ರದಲ್ಲಿ ಮೀಟೂ ಅಭಿಯಾನ ಸದ್ದು ಮಾಡಿದ ಸಂದರ್ಭ ಚನ್ನಿ ಅವರ ಮೇಲೆ ಈ ಆರೋಪ ಕೇಳಿ ಬಂದಿತ್ತು. 'ಮಹಿಳೆ ದೂರು ನೀಡಿಲ್ಲ, ಪ್ರಕರಣ ಇತ್ಯರ್ಥವಾಗಿದೆ' ಎಂದು ಮಾಜಿ ಸಿಎಂ ಅಮರಿಂದರ್‌ ಸಿಂಗ್‌ ಸಮಜಾಯಿಷಿ ನೀಡಿದ್ದರು. ಆದರೆ ಪಂಜಾಬ್‌ ಮಹಿಳಾ ಆಯೋಗವು ಈ ವರ್ಷ ಮೇ ತಿಂಗಳಲ್ಲಿ ರಾಜ್ಯ ಸರ್ಕಾರಕ್ಕೆ ಆರೋಪದ ಕುರಿತಾಗಿ ಪ್ರತಿಕ್ರಿಯೆ ನೀಡುವಂತೆ ನೋಟಿಸ್‌ ಕಳುಹಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು