ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video- ಕುನೊ ಕಾಡಲ್ಲಿ ನಾಲ್ಕು ಮುದ್ದಾದ ಮರಿಗಳಿಗೆ ಜನ್ಮ ನೀಡಿದ ನಮೀಬಿಯಾ ಚೀತಾ

Last Updated 29 ಮಾರ್ಚ್ 2023, 13:04 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):‘ಪ್ರಾಜೆಕ್ಟ್‌ ಚೀತಾ’ ಯೋಜನೆಯಡಿ ನಮೀಬಿಯಾದಿಂದ ಭಾರತಕ್ಕೆ ತರಲಾಗಿದ್ದ ಚೀತಾಗಳಲ್ಲಿ ಒಂದು ಚೀತಾ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್‌ ಯಾದವ್‌ ಬುಧವಾರ ತಿಳಿಸಿದ್ದಾರೆ.

‘ಅಮೃತ ಕಾಲ’ದಲ್ಲಿ ಭಾರತದ ವನ್ಯಜೀವಿ ಸಂರಕ್ಷಣಾ ಇತಿಹಾಸದಲ್ಲೇ ಇದೊಂದು ಮಹತ್ವದ ಘಟನೆ ಎಂದು ಯಾದವ್‌ ಬಣ್ಣಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ 2022ರ ಸೆಪ್ಟೆಂಬರ್ 17ರಂದು ಭಾರತಕ್ಕೆ ಸ್ಥಳಾಂತರಗೊಂಡ ಆಫ್ರಿಕಾ ಚಿರತೆಗಳಲ್ಲಿ ಒಂದು ಚಿರತೆಗೆ ನಾಲ್ಕು ಮರಿಗಳು ಜನಿಸಿರುವ ಮಾಹಿತಿ ಹಂಚಿಕೊಳ್ಳಲು ಸಂತೋಷವಾಗಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಚೀತಾಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿದೆ. 8 ಚೀತಾಗಳಲ್ಲಿ ಇತ್ತೀಚೆಗೆ ಸಾಶಾ ಎಂಬ ಚೀತಾ ಅನಾರೋಗ್ಯದಿಂದ ಮೃತಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT