ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢ: ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆ– ಸಿಎಂ ಭರವಸೆ

Last Updated 26 ಜನವರಿ 2023, 11:18 IST
ಅಕ್ಷರ ಗಾತ್ರ

ಜಗದಲ್ಪುರ: ಛತ್ತೀಸಗಢದಲ್ಲಿ ಮುದಿನ ಹಣಕಾಸು ವರ್ಷದಿಂದ ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆಯನ್ನು ಸರ್ಕಾರದಿಂದ ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಹೇಳಿದ್ದಾರೆ. ಆದರೆ ಭತ್ಯೆಯ ಪ್ರಮಾಣವನ್ನು ಅವರು ತಿಳಿಸಿಲ್ಲ.

ಗುರುವಾರ ಇಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ‘2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಮುಖ ಭರವಸೆಗಳಲ್ಲಿ ನಿರುದ್ಯೋಗ ಭತ್ಯೆ ನೀಡುವುದೂ ಒಂದಾಗಿತ್ತು. ಇದೇ ಕಾರಣಕ್ಕೆ 15 ವರ್ಷಗಳ ಬಳಿಕ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿದೆ’ ಎಂದರು.

‌ಗುಡಿ ಕೈಗಾರಿಕೆ ಆಧಾರಿತ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಲು ರಾಜ್ಯದಲ್ಲಿ ಗ್ರಾಮೀಣ ಉದ್ಯಮ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಅವರು ಭರವಸೆ ನೀಡಿದರು.

ಈ ವರ್ಷದ ಅಂತ್ಯದ ವೇಳೆ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT