ರಾಯಪುರ: ನಿರ್ದಿಷ್ಟ ಸಮುದಾಯದ ವಿರುದ್ಧ ಅವಹೇಳನಕಾರಿ ಪದ ಬಳಸಿದ ಆರೋಪದಡಿ ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆ ನಂದಕುಮಾರ್ ಬಘೇಲ್ ಅವರನ್ನುಮಂಗಳವಾರ ಇಲ್ಲಿ ಬಂಧಿಸಲಾಗಿದೆ.
ತಮ್ಮ ತಂದೆ, 86 ವರ್ಷದ ತಂದೆ ಬಳಸಿದ ಪದ ಕುರಿತು ಮುಖ್ಯಮಂತ್ರಿ ಕೂಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾರೊಬ್ಬರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಅವರನ್ನು ಸ್ಥಳೀಯ ಕೋರ್ಟ್‌ನಲ್ಲಿ ಹಾಜರುಪಡಿಸಲಾಗಿದೆ. ಅವರ ವಿರುದ್ಧ ಸರ್ವ ಬ್ರಾಹ್ಮಣ ಸಮಾಜ ದೂರು ನೀಡಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದು, ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಅವರ ವಿರುದ್ಧ ಭಿನ್ನ ಸಮುದಾಯಗಳ ಮಧ್ಯೆ ವೈಷಮ್ಯ ಉಂಟು ಮಾಡಿದ್ದಕ್ಕೆ ಸಂಬಂಧಿತ ಐಪಿಸಿ 153 (ಎ) ಅನ್ವಯ ಪ್ರಕರಣ ದಾಖಲಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.