ಭಾನುವಾರ, ಏಪ್ರಿಲ್ 11, 2021
22 °C

ಛತ್ತೀಸ್‌ಗಡದಲ್ಲಿ ನಕ್ಸಲರೊಂದಿಗೆ ಎನ್‌ಕೌಂಟರ್ ಐವರು ಯೋಧರು ಹುತಾತ್ಮರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ರಾಯ್‌ಪುರ: ಛತ್ತೀಸ್‌ಗಡದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಮಾವೋವಾದಿ ನಕ್ಸಲರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯ ಐವರು ಸಿಬ್ಬಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಎನ್‌ಕೌಂಟರ್‌ನಲ್ಲಿ ಕೆಲವು ನಕ್ಸಲರೂ ಸಾವಿಗೀಡಾಗಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.

‘ತಾರೆಮ್ ಪ್ರದೇಶದಲ್ಲಿ (ಸುಕ್ಮಾ ಮತ್ತು ಬಿಜಾಪುರ ಗಡಿ) ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಭದ್ರತಾ ಪಡೆಗಳು ತೆರಳಿದ್ದ ಸಂದರ್ಭದಲ್ಲಿ ನಕ್ಸಲರು ಮತ್ತು ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು’ ಎಂದು ಛತ್ತೀಸ್‌ಗಡದ ಪೊಲೀಸ್ ಮಹಾ ನಿರ್ದೇಶಕ ಡಿ.ಎಂ. ಅವಸ್ಥಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು