ಬುಧವಾರ, ಡಿಸೆಂಬರ್ 8, 2021
18 °C

ತನ್ನ ಜನ್ಮದಿನದ ವೇಳೆ ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ಮಸಣ ಸೇರಿದ ಯುವಕ!

ಪಿಟಿಐ Updated:

ಅಕ್ಷರ ಗಾತ್ರ : | |

ದುರ್ಗ್: ಜನ್ಮದಿನ ಆಚರಣೆ ಮಾಡಿಕೊಳ್ಳುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಗನ್‌ನಿಂದ ಗುಂಡು ಸಿಡಿದು ಯುವಕನೊಬ್ಬ ಮೃತಪಟ್ಟ ಘಟನೆ ಚತ್ತೀಸ್‌ಗಢದ ದು‌ರ್ಗ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಮೃತಪಟ್ಟವನನ್ನು ಜವಾಹರ್‌ ನಗರದ ರೋಹನ್ ಸಿಂಗ್ (18) ಎಂದು ಗುರುತಿಸಲಾಗಿದೆ.

ರೋಹನ್ ಸಿಂಗ್ ತನ್ನ ಕುಟುಂಬದವರು ಹಾಗೂ ಸ್ನೇಹಿತರ ಜೊತೆ 18 ನೇ ಜನ್ಮದಿನ ಆಚರಿಸಿಕೊಳ್ಳುತ್ತಿದ್ದರು. ಈ ವೇಳೆ ತನ್ನ ತಂದೆಯ ಗನ್ ತೆಗೆದುಕೊಂಡು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸುವಾಗ ಆಕಸ್ಮಿಕವಾಗಿ ಗುಂಡು ಸಿಡಿದಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ವೇಳೆ ರೋಹನ್ ಸಿಂಗ್ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ರೋಹನ್ ಸಿಂಗ್ ತಂದೆ ಸೆಕ್ಯೂರಿಟಿ ಗಾರ್ಡ್‌ ಆಗಿದ್ದರು. ಅವರ ಬಳಿ 12 ಬೋರ್ ಗನ್‌ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ದುರ್ಗ್ ಜಿಲ್ಲೆಯ ವೈಶಾಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದಾವಣಗೆರೆ: ಪಿಸ್ತೂಲ್‌ ಸ್ವಚ್ಛಗೊಳಿಸುವ ವೇಳೆ ಗುಂಡು ತಗುಲಿ ಕಾನ್‌ಸ್ಟೆಬಲ್ ಸಾವು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು