ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ ಜೀವಾವಧಿ ಶಿಕ್ಷೆ

Last Updated 30 ಜನವರಿ 2021, 7:33 IST
ಅಕ್ಷರ ಗಾತ್ರ

ರಾಯಪುರ: 2019ರಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಡಿ ವ್ಯಕ್ತಿಯೊಬ್ಬನಿಗೆ ಛತ್ತೀಸಗಡ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

2019ರಲ್ಲಿ ಛತ್ತೀಸಗಡದ ದುರ್ಗಾ ಜಿಲ್ಲೆಯಲ್ಲಿ ನಾಲ್ಕೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ನ ನ್ಯಾಯಧೀಶೆ ಮಮತಾ ಬೋಜ್ವಾನಿ ಅವರು ಶುಕ್ರವಾರ ಈ ತೀರ್ಪು ನೀಡಿದ್ದಾರೆ.

‘ತಪ್ಪಿತಸ್ಥನಿಗೆ ಜೀವಾವಧಿ ಶಿಕ್ಷೆ ಮತ್ತು ₹10,000 ದಂಡವನ್ನು ವಿಧಿಸಲಾಗಿದೆ’ ಎಂದು ಸರ್ಕಾರಿ ವಕೀಲ ಕಮಲ್‌ ಕಿಶೋರ್‌ ವರ್ಮಾ ಅವರು ತಿಳಿಸಿದರು.

2019ರ ಆಗಸ್ಟ್‌ 19ರಂದು ತನ್ನ ಸಹೋದರಿಯ ಮಗಳ ಮೇಲೆ ಅಪರಾಧಿ ಅತ್ಯಾಚಾರವೆಸಗಿದ್ದ. ಈ ಕುರಿತು ಸಂತ್ರಸ್ತೆಯ ತಾಯಿ ಪ್ರಕರಣ ದಾಖಲಿಸಿದ್ದರು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT