ಬುಧವಾರ, ಸೆಪ್ಟೆಂಬರ್ 29, 2021
21 °C

ಛತ್ತೀಸಗಡ: ಎನ್‌ಕೌಂಟರ್‌ನಲ್ಲಿ ನಕ್ಸಲ್‌ ಹತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಸುಕ್ಮಾ: ‘ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್‌ ಹತ್ಯೆಯಾಗಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

‘ಮಿನ್ಪಾ ಗ್ರಾಮದ ಬಳಿಯಿರುವ ಅರಣ್ಯ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಜಂಟಿ ಕಾರ್ಯಾಚರಣೆ ನಡೆಸಿವೆ. ಈ ವೇಳೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ’ ಎಂದು ಸುಕ್ಮಾ ಪೊಲೀಸ್‌ ವರಿಷ್ಠಾಧಿಕಾರಿ ಸುನಿಲ್‌ ಶರ್ಮಾ ತಿಳಿಸಿದರು.

‘ಸುಮಾರು ಒಂದು ಗಂಟೆ ಕಾಲ ಗುಂಡಿನ ಕಾಳಗ ನಡೆದಿದ್ದು, ಬಳಿಕ ನಕ್ಸಲರು ಅರಣ್ಯದೊಳಗೆ ಓಡಿ ಹೋದರು. ಘಟನಾ ಸ್ಥಳದಲ್ಲಿ ರಕ್ತದ ಕಲೆಗಳಿದ್ದವು. ಹಾಗಾಗಿ ಒಂದಕ್ಕಿಂತ ಹೆಚ್ಚು ನಕ್ಸಲರು ಗಾಯಗೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ. ಸದ್ಯ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು