ಗುರುವಾರ , ಜೂನ್ 24, 2021
28 °C

ಛತ್ತೀಸ್‌ಗಡ | ಗುಂಡಿನ ಚಕಮಕಿ: ನಾಲ್ಕು ನಕ್ಸಲರು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ರಾಯ‌ಪುರ: ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಮತ್ತು ಭದ್ರತಾ ಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು. 

‘ಜಿಲ್ಲಾ ಮೀಸಲು ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ‘ಕೋಬ್ರಾ’ ಪಡೆಗಳು ಜಗರಗುಂಡ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ 9.30ರ ಸುಮಾರಿಗೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದವು. ಈ ವೇಳೆ ಫುಲಾಂಪರ್ ಗ್ರಾಮದ ಬಳಿ ಭದ್ರತಾ ಪಡೆಗೆ ನಕ್ಸಲರು ಮುಖಾಮುಖಿಯಾಗಿದ್ದಾರೆ. ಆಗ ಎರಡೂ ಕಡೆಯಿಂದ ಗುಂಡಿನ ಚಕಮಕಿ ನಡೆದಿದೆ’ ಎಂದು ಐಜಿಪಿ ಪಿ. ಸುಂದರರಾಜ್‌ ಅವರು ಮಾಹಿತಿ ನೀಡಿದರು.

ಘಟನಾ ಸ್ಥಳದಿಂದ ರೈಫಲ್‌ ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು