ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಡ: ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ: 7 ಮಂದಿ ಸಾವು, ಮೂವರಿಗೆ ಗಾಯ

Last Updated 12 ಸೆಪ್ಟೆಂಬರ್ 2022, 4:02 IST
ಅಕ್ಷರ ಗಾತ್ರ

ಕೊರಬಾ: ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ಛತ್ತೀಸಗಡ ರಾಜಧಾನಿ ರಾಯ್‌ಪುರದಿಂದ ಸರ್‌ಗುಜ ಜಿಲ್ಲೆಗೆ ಸಂಚರಿಸುತ್ತಿತ್ತು.

ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮಡಾಯಿ ಘಾಟಿ ಬಳಿ ಇಂದು ಮುಂಜಾನೆ ಸುಮಾರು 4 ಗಂಟೆಗೆ ಅವಘಡ ಸಂಭವಿಸಿದೆ ಎಂದು ಕೊರಬಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ಮುಂಭಾಗದಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಏಳು ಮಂದಿ ಬಸ್ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT