ಸೋಮವಾರ, ಆಗಸ್ಟ್ 2, 2021
21 °C

ಛತ್ತೀಸಗಡದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿ ಮೂವರು ಕಾರ್ಮಿಕರ ಸಾವು

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಸೂರಜ್‌ಪುರ (ಛತ್ತೀಸಗಡ): ಛತ್ತೀಸಗಡದ ಸೂರಜ್‌ಪುರದಲ್ಲಿ ಭಾನುವಾರ ಕೊಳವೆ ಬಾವಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕೊಳವೆ ಬಾವಿಯಲ್ಲಿ ಮಣ್ಣು ಕುಸಿತದ ಪರಿಣಾಮ ಉಂಟಾಗಿರುವ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಮೂರನೇ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸೂರಜ್‌ಪುರ ಜಿಲ್ಲಾಧಿಕಾರಿ ಗೌರವ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: 

ಸೂರಜ್‌ಪುರ ಜಿಲ್ಲೆಯಲ್ಲಿ ಸಂಭವಿಸಿದ ಮಣ್ಣು ಕುಸಿತದಿಂದಾಗಿ ಬೋರ್‌ವೆಲ್‌ನಲ್ಲಿ ಸಿಕ್ಕಿ ಹಾಕಿಕೊಂಡು ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡ ಸಂಬಂಧ ನಿಖರ ತನಿಖೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು