ನವದೆಹಲಿ: ಸುಸ್ಥಿರ ಅಭಿವೃದ್ಧಿಯ ಗುರಿಯನ್ನು (ಎಸ್‌ಡಿಜಿ) ಸಾಧಿಸುವ ನಿಟ್ಟಿನಲ್ಲಿ ಲಿಂಗ ಸಮಾನತೆಯ ಶ್ರೇಯಾಂಕದಲ್ಲಿ ಛತ್ತೀಸ್‌ಗಡ ರಾಜ್ಯವು ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ನೀತಿ ಆಯೋಗದ 2020–21ನೇ ವರದಿ ತಿಳಿಸಿದೆ.

ಕಳೆದ ವರ್ಷ ಛತ್ತೀಸ್‌ಗಡ ರಾಜ್ಯವು ಲಿಂಗಸಮಾನತೆಯ ಶ್ರೇಯಾಂಕದಲ್ಲಿ 43 ಅಂಕ ಗಳಿಸಿ, ದೇಶದಲ್ಲಿ ಏಳನೇ ಸ್ಥಾನ ಪಡೆದಿತ್ತು. ಈ ವರ್ಷ ರಾಜ್ಯವು 61 ಅಂಕಗಳನ್ನು ಗಳಿಸಿ ಅಗ್ರಸ್ಥಾನಕ್ಕೇರಿದೆ.

ಕೇರಳವು ಎರಡನೇ ಸ್ಥಾನದಲ್ಲಿದ್ದರೆ, ಬಿಹಾರ ಕೊನೆಯ ಸ್ಥಾನದಲ್ಲಿದೆ.

ವಿಶ್ವಸಂಸ್ಥೆಯ ಸಹಯೋಗದಲ್ಲಿ ಭಾರತವು ರಾಷ್ಟ್ರ ಮತ್ತು ರಾಜ್ಯಮಟ್ಟದಲ್ಲಿ ಸುಸ್ಥಿರ ಅಭಿವೃದ್ಧಿಯ ಶ್ರೇಯಾಂಕವನ್ನು ಮೌಲ್ಯಮಾಪನ ಮಾಡಿದೆ.

ಜನನ ಸಮಯದಲ್ಲಿ ಲಿಂಗಾನುಪಾತ ಮತ್ತು ಸಮಾನ ಲಿಂಗ ವೇತನದಂತಹ ವಿಷಯಗಳಲ್ಲಿ ಛತ್ತೀಸ್‌ಗಡದ ಶ್ರೇಯಾಂಕದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವರದಿ ತಿಳಿಸಿದೆ. ಅಷ್ಟೇ ಅಲ್ಲದೆ, ಛತ್ತೀಸ್‌ಗಡದಲ್ಲಿ ಮಹಿಳೆಯರ ಮೇಲಿನ ಅಪರಾಧ ಮತ್ತು ಕೌಟುಂಬಿಕ ದೌರ್ಜನ್ಯದಲ್ಲಿ ಇಳಿಕೆ ಕಂಡಿದೆ.

ಛತ್ತೀಸ್‌ಗಡವು ಶುದ್ಧ ನೀರು, ನೈರ್ಮಲ್ಯ, ಸಮಾನ ಕೆಲಸ ಮತ್ತು ಆರ್ಥಿಕ ಅಭಿವೃದ್ಧಿಯ ಮೂಲಕ ಅಸಮಾನತೆಯನ್ನು ನಿವಾರಣೆ ಮಾಡುವಲ್ಲಿ ಮುಂಚೂಣಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.