ಕಂಕೇರ್: ಮಂಗಳವಾರ ಬೆಳಗ್ಗೆ ಕಂಕೇರ್ ಜಿಲ್ಲೆಯಲ್ಲಿ ನಕ್ಸಲೀಯರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡಿದ್ದರಿಂದ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಯಲಿಬೆಡ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕೇರ್‌ನಿಂದ ಸುಮಾರು 120 ಕಿ.ಮೀ ದೂರದಲ್ಲಿರುವ ಚಿಲ್ಪಾರಸ್‌ನಲ್ಲಿರುವ ಬಿಎಸ್‌ಎಫ್ ಶಿಬಿರದ ಬಳಿ ತಂಡವು ರಸ್ತೆ ಭದ್ರತಾ ಕಾರ್ಯಾಚರಣೆಯಲ್ಲಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಗೊಂಡ ಯೋಧರನ್ನು ಕೊಯಲಿಬೆಡದ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದ್ದು, ಘಟನೆ ನಡೆದ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸೋಮವಾರ, ರಾಜ್ಯದ ಬಿಜಾಪುರ ಜಿಲ್ಲೆಯಲ್ಲಿ ಐಇಡಿ ಸ್ಫೋಟದಲ್ಲಿ ಛತ್ತೀಸ್‌ಗಢ ಸಶಸ್ತ್ರ ಪಡೆ (ಸಿಎಎಫ್) ಸಹಾಯಕ ಪ್ಲಟೂನ್ ಕಮಾಂಡರ್ ಮೃತಪಟ್ಟಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.