ಭಾನುವಾರ, ಸೆಪ್ಟೆಂಬರ್ 26, 2021
25 °C

ನ್ಯಾಯಮೂರ್ತಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಕೇಂದ್ರ ವಿಫಲ: ಪಿ.ಚಿದಂಬರಂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಹಲವು ಹೈಕೋರ್ಟ್‌ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರು, ಅಧ್ಯಕ್ಷರ ಸ್ಥಾನಗಳು ಖಾಲಿ ಇವೆ. ಆದರೆ ಕೇಂದ್ರ ಸರ್ಕಾರ ಈ ಸ್ಥಾನಗಳನ್ನು ಭರ್ತಿ ಮಾಡುವಲ್ಲಿ ವಿಫಲವಾಗಿದೆ’ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ದೂರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಹೈಕೋರ್ಟ್‌ಗಳಿಗೆ ಮಂಜೂರಾಗಿರುವ 1,080 ನ್ಯಾಯಮೂರ್ತಿ ಹುದ್ದೆಗಳ ಪೈಕಿ 416 ಖಾಲಿಯಿವೆ. ಡಿಆರ್‌ಟಿ, ಎನ್‌ಸಿಎಲ್‌ಎಟಿ, ಟಿಡಿಎಸ್‌ಎಟಿ ಸೇರಿದಂತೆ ಹಲವು ನ್ಯಾಯಮಂಡಳಿಗಳಲ್ಲಿ ಅಧ್ಯಕ್ಷರ ಸ್ಥಾನಗಳೂ ಖಾಲಿಯಿವೆ’ ಎಂದು ಅವರು ಹೇಳಿದ್ದಾರೆ.

‘ಏಳು ವರ್ಷಗಳಿಂದ ಮೋದಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದೆ. ಆದರೂ ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ’ ಎಂದಿದ್ದಾರೆ.

‘ನಮ್ಮ ದೇಶದಲ್ಲಿ ಈ ಸ್ಥಾನಗಳಿಗೆ ಬೇಕಾಗಿರುವ ಅರ್ಹ ವಕೀಲರು ಮತ್ತು ನ್ಯಾಯಧೀಶರ ಕೊರತೆಗಳಿಲ್ಲ. ಆದರೆ ಕೇಂದ್ರ ಸರ್ಕಾರವು ತನ್ನ ಸಿದ್ಧಾಂತಗಳ ಬಗ್ಗೆ ಸಹಾನುಭೂತಿ ಹೊಂದಿರುವ ಜನರನ್ನು ಈ ಹುದ್ದೆಗಳಿಗಾಗಿ ಹುಡುಕುತ್ತಿದೆ. ಹಾಗಾಗಿ ಈ ಸ್ಥಾನಗಳು ಖಾಲಿಯಾಗಿಯೇ ಉಳಿದಿವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು