ಬುಧವಾರ, ಮೇ 12, 2021
18 °C

ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಕೋವಿಡ್-19 ದೃಢ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

prajavani

ಜೈಪುರ: ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಇಂದ್ರಜಿತ್ ಮಹಾಂತಿ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶನಿವಾರ ಮಾಡಿರುವ ಟ್ವೀಟ್‌ನಲ್ಲಿ ಮಾಹಿತಿ ನೀಡಿದ್ದಾರೆ.

'ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಇಂದ್ರಜಿತ್ ಮಹಾಂತಿ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುವುದು ಗಮನಕ್ಕೆ ಬಂದಿದೆ. ಅವರು ಆದಷ್ಟು ಶೀಘ್ರವಾಗಿ ಚೇತರಿಸಿಕೊಳ್ಳಲಿ' ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ 49,000 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿರುವ ಮಾರಣಾಂತಿಕ ಕೊರೊನಾ ವೈರಸ್‌ಗೆ ಹೈಕೋರ್ಟ್‌ನ ಐವರು ನೌಕರರಿಗೂ ಸೋಂಕು ತಗುಲಿರುವುದು ದೃಢಪಟ್ಟ ದಿನದ ನಂತರ ಮುಖ್ಯ ನ್ಯಾಯಮೂರ್ತಿಗೂ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಶನಿವಾರವಷ್ಟೇ 59 ವರ್ಷದ ನ್ಯಾಯಮೂರ್ತಿ ಮಹಾಂತಿ ಅವರು ನ್ಯಾಯಾಲಯದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರು, ನ್ಯಾಯಾಂಗ ಅಧಿಕಾರಿಗಳು ಮತ್ತು ಸುಮಾರು 100 ವಕೀಲರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಕೊರೊನಾ ವೈರಸ್ ತಪಾಸಣೆ ನಡೆಸುವಂತೆ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಪರೀಕ್ಷೆಗಳನ್ನು ನಡೆಸಲು ವೈದ್ಯಕೀಯ ತಂಡವು ಇಂದು ರಾಜಸ್ಥಾನ ಹೈಕೋರ್ಟ್ ಬಾರ್ ಕಚೇರಿಗೆ ಭೇಟಿ ನೀಡಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು