ಅರುಣಾಚಲ ಪ್ರದೇಶ: ವಾಯುನೆಲೆಗಳಿಗೆ ರಾವತ್ ಭೇಟಿ

ನವದೆಹಲಿ: ಪೂರ್ವ ಲಡಾಖ್‌ನಲ್ಲಿ ಭಾರತ– ಚೀನಾ ನಡುವಿನ ಗಡಿ ಬಿಕ್ಕಟ್ಟು ಮುಂದುವರಿದಿರುವ ಬೆನ್ನಲ್ಲೇ, ಅರುಣಾಚಲ ಪ್ರದೇಶದಲ್ಲಿ ವಾಸ್ತವ ನಿಯಂತ್ರಣ ರೇಖೆಯ ಸಮೀಪವಿರುವ ಹಲವು ವಾಯುನೆಲೆಗಳಿಗೆ ಸೇನಾಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್ ಅವರು ಶನಿವಾರ ಭೇಟಿ ನೀಡಿ, ಸೇನಾ ಸನ್ನದ್ಧತೆಯ ಬಗ್ಗೆ ವಿಸ್ತೃತ ಪ್ರಗತಿಪರಿಶೀಲನೆ ನಡೆಸಿದ್ದಾರೆ.
ಅರುಣಾಚಲ ಪ್ರದೇಶದ ಲೋಹಿತ್ ವಲಯ ಹಾಗೂ ಡಿಬಾಂಗ್ ಕಣಿವೆಯಲ್ಲಿರುವ ಮುಂಚೂಣಿ ನೆಲೆಗಳಲ್ಲಿ ನಿಯೋಜಿಸಲ್ಪಟ್ಟಿರುವ ಸ್ಪೆಷಲ್ ಫ್ರಂಟಿಯರ್ ಫೋರ್ಸ್(ಎಸ್‌ಎಫ್‌ಎಫ್), ಸೇನೆ ಹಾಗೂ ಇಂಡೊ–ಟಿಬೆಟನ್ ಗಡಿ ಪೊಲೀಸ್(ಐಟಿಬಿಪಿ) ಸಿಬ್ಬಂದಿ ಜೊತೆ ರಾವತ್ ಅವರು ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಪರಿಣಾಮಕಾರಿ ಕಣ್ಗಾವಲು ಹಾಗೂ ಕಾರ್ಯಾಚರಣೆಗೆ ಸನ್ನದ್ಧರಾಗಿರುವುದಕ್ಕಾಗಿ ಸಿಬ್ಬಂದಿಯನ್ನು ರಾವತ್ ಶ್ಲಾಘಿಸಿದ್ದಾರೆ. ಭಾನುವಾರವೂ, ಹಲವು ಪ್ರಮುಖ ಸೇನಾ ನೆಲೆಗಳಿಗೆ ರಾವತ್ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.