ಮಂಗಳವಾರ, ಮಾರ್ಚ್ 2, 2021
23 °C

ಹಲವಾರು ವರ್ಷಗಳಿಂದ ಭಾರತ ಗಡಿಗಳಲ್ಲಿ ಚೀನಾ ಮೂಲಸೌಕರ್ಯ ಯೋಜನೆ: ಕೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಚೀನಾವು ಹಲವಾರು ವರ್ಷಗಳಿಂದ ಗಡಿ ಭಾಗಗಳಲ್ಲಿ ಮೂಲಸೌಕರ್ಯ ನಿರ್ಮಾಣ ಕಾಮಗಾರಿಯನ್ನು ಮಾಡುತ್ತಾ ಬಂದಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಅರುಣಾಚಲ ಪ್ರದೇಶ ಗಡಿಯಲ್ಲಿ ಚೀನಾ ನಿರ್ಮಾಣ ಕಾಮಗಾರಿ ನಡೆಸುತ್ತಿದೆ ಎಂಬ ವರದಿಗಳಿಗೆ ಸಚಿವಾಲಯ ಈ ರೀತಿ ಪ್ರತಿಕ್ರಿಯಿಸಿದೆ.

ಭಾರತದ ಜತೆಗಿನ ಗಡಿ ಪ್ರದೇಶಗಳಲ್ಲಿ ಚೀನಾ ಮೂಲಸೌಕರ್ಯ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಬಗ್ಗೆ ಇತ್ತೀಚೆಗೆ ವರದಿಗಳನ್ನು ನೋಡಿದ್ದೇವೆ. ಅಂಥ ನಿರ್ಮಾಣ ಕಾಮಗಾರಿಯನ್ನು ಚೀನಾವು ಕಳೆದ ಹಲವಾರು ವರ್ಷಗಳಿಂದ ನಡೆಸಿಕೊಂಡು ಬಂದಿದೆ ಎಂಬ ವಿದೇಶಾಂಗ ಸಚಿವಾಲಯದ ಹೇಳಿಕೆಯನ್ನು ‘ಎಎನ್‌ಐ ಸುದ್ದಿಸಂಸ್ಥೆ’ ಟ್ವೀಟ್ ಮಾಡಿದೆ.

‘ಗಡಿ ಪ್ರದೇಶಗಳಲ್ಲಿ ರಸ್ತೆ, ಸೇತುವೆ ಸೇರಿದಂತೆ ಮೂಲಸೌಕರ್ಯ ಯೋಜನೆಯನ್ನು ಭಾರತವೂ ಹಮ್ಮಿಕೊಂಡಿದೆ. ಅರುಣಾಚಲ ಪ್ರದೇಶವೂ ಸೇರಿದಂತೆ ಗಡಿ ಪ್ರದೇಶಗಳಲ್ಲಿರುವ ಜನರ ಜೀವನ ಮಟ್ಟ ಸುಧಾರಿಸಲು ಮತ್ತು ಸಂಪರ್ಕ ಕಲ್ಪಿಸುವ ದೃಷ್ಟಿಯಿಂದ ಮೂಲಸೌಕರ್ಯ ಕಲ್ಪಿಸಲು ಬಾರತವೂ ಬದ್ಧವಾಗಿದೆ’ ಎಂದು ಸಚಿವಾಲಯ ಹೇಳಿದೆ.

ದೇಶದ ಭದ್ರತೆಯ ಮೇಲೆ ಪರಿಣಾಮ ಬೀರುವ ಎಲ್ಲ ಬೆಳವಣಿಗೆಗಳ ಬಗ್ಗೆ ಸರ್ಕಾರ ನಿರಂತರ ನಿಗಾ ಇರಿಸುತ್ತಿದೆ. ದೇಶದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಬೇಕಾದ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದೂ ಸಚಿವಾಲಯ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು