ಬುಧವಾರ, ಡಿಸೆಂಬರ್ 8, 2021
25 °C

ಗಡಿಯಲ್ಲಿ ಸೇನಾ ನಿಯೋಜನೆ ಹೆಚ್ಚಿಸುತ್ತಿರುವ ಚೀನಾ: ಲೆಫ್ಟಿನೆಂಟ್ ಜನರಲ್ ಪಾಂಡೆ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ರುಪಾ: ಅರುಣಾಚಲ ಪ್ರದೇಶಕ್ಕೆ ಹೊಂದಿಕೊಂಡಂತಿರುವ ವಾಸ್ತವ ಗಡಿ ನಿಯಂತ್ರಣ ರೇಖೆ ಪ್ರದೇಶಗಳಲ್ಲಿ ಚೀನಾವು ಸೇನೆ ಮತ್ತು ಶಸ್ತ್ರಾಸ್ತ್ರಗಳ ನಿಯೋಜನೆ ಹೆಚ್ಚಿಸಿದೆ. ಈ ಪ್ರದೇಶದಲ್ಲಿ ಎದುರಾಗುವ ಯಾವುದೇ ಸವಾಲುಗಳನ್ನು ಎದುರಿಸಲು ಭಾರತವು ಯೋಜನೆಗಳನ್ನು ಸಿದ್ಧಪಡಿಸಿದೆ ಎಂದು ಪೂರ್ವ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಮಂಗಳವಾರ ಹೇಳಿದ್ದಾರೆ.

ಭಾರತದ ಒಟ್ಟಾರೆ ಸೇನಾ ಆಧುನೀಕರಣದ ಕುರಿತು ಮಾಹಿತಿ ನೀಡಿದ ಲೆಫ್ಟಿನೆಂಟ್ ಜನರಲ್ ಪಾಂಡೆ, ‘ಹೆಚ್ಚು ಪರಿಣಾಮಕಾರಿ ವಿಧಾನದೊಂದಿಗೆ ಕ್ಷಿಪ್ರವಾಗಿ ಸಜ್ಜುಗೊಳಿಸಬಹುದಾದ ಇಂಟಿಗ್ರೇಟೆಡ್ ಬ್ಯಾಟಲ್ ಗ್ರೂಪ್ಸ್ (ಐಬಿಜಿ) ಎಂಬ ಹೊಸ ಯುದ್ಧ ವ್ಯೂಹ ರಚನೆಗೆ ತಾತ್ವಿಕ ಅನುಮೋದನೆ ನೀಡಲಾಗಿದೆ,’ ಎಂದೂ ತಿಳಿಸಿದರು. 

ಕಾಲಾಳುಪಡೆ, ಫಿರಂಗಿ, ವಾಯು ಪಡೆ, ಟ್ಯಾಂಕ್ ಮತ್ತು ಶಸ್ತ್ರಾಸ್ತ್ರ ರವಾನೆ ಘಟಕಗಳನ್ನು ಐಬಿಜಿ ಒಳಗೊಂಡಿರಲಿದೆ. ಈ ಹೊಸ ಯೋಜನೆಯು ಸೇನೆಯ ಯುದ್ಧ ಸಾಮರ್ಥ್ಯವನ್ನು ವಿಸ್ತರಿಸಲಿದೆ. ವಿಶೇಷವಾಗಿ ಚೀನಾ ಮತ್ತು ಪಾಕಿಸ್ತಾನದ ಗಡಿಗಳಲ್ಲಿ ಇದು ಹೆಚ್ಚಿನ ಬಲ ತಂದು ಕೊಡಲಿದೆ ಎಂದು ಅವರು ಹೇಳಿದ್ದಾರೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು