ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರವೇಶ ಬೇಡ: ಅಮೆರಿಕಕ್ಕೆ ಚೀನಾ ಸಂದೇಶ

Last Updated 28 ಅಕ್ಟೋಬರ್ 2020, 18:07 IST
ಅಕ್ಷರ ಗಾತ್ರ

ನವದೆಹಲಿ: ‘ಭಾರತದೊಂದಿಗಿನ ಗಡಿ ವಿವಾದವು ದ್ವಿಪಕ್ಷೀಯ ವಿಷಯವಾಗಿದ್ದು, ಇದರಲ್ಲಿ ಮೂರನೇ ವ್ಯಕ್ತಿಗೆ ಮಧ್ಯಪ್ರವೇಶಿಸಲು ಅವಕಾಶವಿಲ್ಲ’ ಎಂದು ಚೀನಾ ಬುಧವಾರ ಹೇಳಿದೆ.

ಚೀನಾದಿಂದ ಎದುರಾಗಬಹುದಾದ ಯಾವುದೇ ರಕ್ಷಣಾ ಬೆದರಿಕೆಯನ್ನು ಎದುರಿಸಲು ಭಾರತಕ್ಕೆ ನೆರವಾಗುವುದಾಗಿ ಅಮೆರಿಕದ ಇಬ್ಬರು ಸಚಿವರು ಹೇಳಿಕೆ ನೀಡಿರುವ ಬೆನ್ನಿಗೇ ಚೀನಾ ಈ ಪ್ರತಿಕ್ರಿಯೆ ನೀಡಿದೆ.

‘ಇದು ಭಾರತ–ಚೀನಾ ನಡುವಿನ ವಿಚಾರ. ಗಡಿಯಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡುವ ಮತ್ತು ಸೇನೆಯನ್ನು ಹಿಂದಕ್ಕೆ ಕರೆಯಿಸಿಕೊಳ್ಳುವ ವಿಚಾರವಾಗಿ ಸೇನೆ ಹಾಗೂ ರಾಜತಾಂತ್ರಿಕ ಮಾರ್ಗಗಳಲ್ಲಿ ಮಾತುಕತೆ ನಡೆಸುವ ಮೂಲಕ ಎರಡೂ ರಾಷ್ಟ್ರಗಳು ಪ್ರಯತ್ನ ಮಾಡುತ್ತಿವೆ. ನಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಸಮರ್ಥವಾಗಿ ನಿರ್ವಹಿಸುವ ಶಕ್ತಿ ಚೀನಾ ಹಾಗೂ ಭಾರತಕ್ಕೆ ಇದೆ. ಮೂರನೇ ವ್ಯಕ್ತಿಯ ಮಧ್ಯಪ್ರವೇಶಕ್ಕೆ ಅವಕಾಶ ಇಲ್ಲ’ ಎಂದು ಚೀನಾ ಹೇಳಿದೆ.

ಚೀನಾ ಈ ಹೇಳಿಕೆಯ ಮೂಲಕ ಅಮೆರಿಕಕ್ಕೆ ಕಠಿಣ ಸಂದೇಶ ನೀಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT