ಮಂಗಳವಾರ, ಜುಲೈ 5, 2022
21 °C

ಪ್ಯಾಂಗೊಂಗ್‌ ಸೇತುವೆ ಚೀನಾ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶದಲ್ಲಿದೆ: ಭಾರತ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪೂರ್ವ ಲಡಾಖ್‌ನ ಪ್ಯಾಂಗೊಂಗ್ ಸರೋವರಕ್ಕೆ ಅಡ್ಡಲಾಗಿ ಚೀನಾ ಸೇತುವೆ ನಿರ್ಮಿಸುತ್ತಿರುವ ಪ್ರದೇಶವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶವಾಗಿದೆ ಎಂದು ಕೇಂದ್ರ ಸರ್ಕಾರವು ಸಂಸತ್ತಿಗೆ ತಿಳಿಸಿದೆ. ಭಾರತದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಇತರ ದೇಶಗಳು ಗೌರವಿಸಬೇಕೆಂದು ಸರ್ಕಾರ ನಿರೀಕ್ಷಿಸುತ್ತದೆ ಎಂದು ಅದು ಹೇಳಿದೆ.

‘ಪ್ಯಾಂಗೊಂಗ್ ಸರೋವರದ ಮೇಲೆ ಚೀನಾ ನಿರ್ಮಿಸುತ್ತಿರುವ ಸೇತುವೆಯನ್ನು ಸರ್ಕಾರ ಗಮನಿಸಿದೆ. ಈ ಸೇತುವೆಯನ್ನು 1962ರಿಂದ ಚೀನಾವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳಲ್ಲಿ ನಿರ್ಮಿಸಲಾಗುತ್ತಿದೆ’ಎಂದು ಸರ್ಕಾರ ಲಿಖಿತ ಪ್ರತಿಕ್ರಿಯೆಯಲ್ಲಿ ಸಂಸತ್ತಿಗೆ ತಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

‘ಭಾರತ ಸರ್ಕಾರವು ಚೀನಾದ ಭೂಕಬಳಿಕೆಯನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗವಾಗಿವೆ. ಭಾರತದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಇತರ ದೇಶಗಳು ಗೌರವಿಸಬೇಕು ಎಂದು ನಾವು ಹಲವಾರು ಸಂದರ್ಭಗಳಲ್ಲಿ ಸ್ಪಷ್ಟಪಡಿಸಿದ್ದೇವೆ’ಎಂದು ಸರ್ಕಾರ ಹೇಳಿದೆ.

8 ಮೀಟರ್ ಅಗಲವಿರುವ ಈ ಸೇತುವೆಯು ಪ್ಯಾಂಗೊಂಗ್‌ ಸರೋವರಕ್ಕೆ ಉತ್ತರ ಭಾಗದ ದಡದ ಚೀನಾದ ಸೇನಾ ನೆಲೆಯ ದಕ್ಷಿಣಕ್ಕೆ ಇದೆ. 2020 ರಲ್ಲಿ ಭಾರತ ಮತ್ತು ಚೀನೀ ಸೈನಿಕರ ನಡುವಿನ ಘರ್ಷಣೆಯ ಸಮಯದಲ್ಲಿ ಇಲ್ಲಿ ಚೀನಾದ ಆಸ್ಪತ್ರೆಗಳು ಮತ್ತು ಸೈನಿಕ ವಸತಿಗಳು ಇದ್ದವು.

2020 ರಿಂದ ಮತ್ತು ವಿಶೇಷವಾಗಿ ಗಾಲ್ವಾನ್ ಪ್ರದೇಶದಲ್ಲಿ ಹಿಂಸಾತ್ಮಕ ಮುಖಾಮುಖಿಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು