ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಡಾಖ್‌ ಗಡಿಯಲ್ಲಿ ಚೀನಾದಿಂದ ಮೂಲಸೌಕರ್ಯ ಅಭಿವೃದ್ಧಿ ಆತಂಕಕಾರಿ: ಅಮೆರಿಕ

Last Updated 8 ಜೂನ್ 2022, 19:31 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಲಡಾಖ್‌ಗೆ ಹೊಂದಿರುವ ತನ್ನ ಗಡಿಯಲ್ಲಿ ಚೀನಾ ರಕ್ಷಣಾ ಮೂಲಸೌಕರ್ಯ ಅಭಿವೃದ್ಧಿಪಡಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅಮೆರಿಕ ಸೇನೆಯ ಹಿರಿಯ ಅಧಿಕಾರಿಯೊಬ್ಬರು ಬುಧವಾರ ಹೇಳಿದ್ದಾರೆ.

ಭಾರತಕ್ಕೆ ಭೇಟಿ ನೀಡಿರುವ ಅಮೆರಿಕ ಸೇನೆಯ ಪೆಸಿಫಿಕ್ ಕಮಾಂಡ್‌ನ ಜನರಲ್ ಚಾರ್ಲ್ಸ್ ಎ.ಫ್ಲಿನ್‌ ಅವರು, ‘ಹಿಂದೂಮಹಾಸಾಗರ–ಪೆಸಿಫಿಕ್‌ ಪ್ರದೇಶವನ್ನು ಅಸ್ಥಿರಗೊಳಿಸಲು ಚೀನಾದ ಕಮ್ಯುನಿಸ್ಟ್ ಪಾರ್ಟಿ (ಸಿಸಿಪಿ) ಯತ್ನಿಸುತ್ತಿದೆ’ ಎಂದರು.

‘ಗಡಿಗೆ ಸಂಬಂಧಿಸಿ ಚೀನಾ ಹಾಗೂ ಭಾರತದ ನಡುವಿನ ಸಂಘರ್ಷ ಯಾವಾಗ ಅಂತ್ಯವಾಗಲಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ಗಡಿಯಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುತ್ತಿರುವ ಉದ್ದೇಶ ಏನು ಎಂದು ಚೀನಾಕ್ಕೆ ಪ್ರಶ್ನಿಸಬೇಕಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT