ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್–ಚೀನಾ ಮಿಲಿಟರಿ ಸಹಕಾರದಿಂದ ಪ್ರಾದೇಶಿಕ ಭದ್ರತೆಗೆ ಧಕ್ಕೆ: ಅಡ್ಮಿರಲ್ ಕರಂವೀರ್

Last Updated 25 ನವೆಂಬರ್ 2021, 10:41 IST
ಅಕ್ಷರ ಗಾತ್ರ

ಮುಂಬೈ: ‘ಹಡಗುಗಳು, ಜಲಾಂತರ್ಗಾಮಿಗಳೂ ಸೇರಿದಂತೆ ಹಲವಾರು ಮಿಲಿಟರಿ ಸಾಮಗ್ರಿಗಳನ್ನು ಪಾಕಿಸ್ತಾನಕ್ಕೆ ಚೀನಾ ಪೂರೈಸುತ್ತಿದೆ. ಉಭಯ ದೇಶಗಳ ನಡುವಿನ ಈ ಸಹಕಾರ ಪ್ರಾದೇಶಿಕ ಭದ್ರತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ’ ಎಂದು ಭಾರತೀಯ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂವೀರ್‌ ಸಿಂಗ್‌ ಗುರುವಾರ ಹೇಳಿದರು.

ಸ್ಕಾರ್ಪಿಯಾನ್‌ ಸರಣಿಯ ಜಲಾಂತರ್ಗಾಮಿ ‘ಐಎನ್‌ಎಸ್‌ ವೇಲಾ’ವನ್ನು ನೌಕಾಪಡೆಗೆ ಸೇರ್ಪಡೆಗೊಳಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ನಡೆದ ಸಂವಾದದಲ್ಲಿ ಅವರು ಈ ವಿಷಯ ತಿಳಿಸಿದರು.

‘ನೌಕಾಪಡೆಗೆ ಸಂಬಂಧಿಸಿ ಚೀನಾ ಮತ್ತು ಪಾಕಿಸ್ತಾನಗಳ ನಡುವಿನ ಈ ಸಹಕಾರವನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಬೆಳವಣಿಗೆಯಿಂದಾಗಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಹ ಭಾರತ ಸನ್ನದ್ಧವಾಗಬೇಕಿದೆ’ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.

ಚೀನಾ ಸ್ಟೇಟ್‌ ಶಿಪ್‌ಬಿಲ್ಡಿಂಗ್ ಕಾರ್ಪೊರೇಷನ್‌ ಲಿಮಿಟೆಡ್‌ (ಸಿಎಸ್‌ಎಸ್‌ಸಿ) ನಿರ್ಮಿಸಿರುವ ಯುದ್ಧನೌಕೆಯೊಂದನ್ನು ಇತ್ತೀಚೆಗೆ ಶಾಂಘೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಕಿಸ್ತಾನಕ್ಕೆ ಹಸ್ತಾಂತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT