ಸೋಮವಾರ, ಜೂನ್ 27, 2022
28 °C

ಪಶ್ಚಿಮಬಂಗಾಳ ಗಡಿಯಲ್ಲಿ ಚೀನಾದ ಪ್ರಜೆ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ‘ಪಶ್ಚಿಮ ಬಂಗಾಳದ ಭಾರತ–ಬಾಂಗ್ಲಾದೇಶ ಅಂತರರಾಷ್ಟ್ರೀಯ ಗಡಿಯಲ್ಲಿ ಚೀನಾದ ಪ್ರಜೆಯನ್ನು ಗಡಿ ಭದ್ರತಾ ಪಡೆಯು(ಬಿಎಸ್‌ಎಫ್‌) ಗುರುವಾರ ಬಂಧಿಸಿದೆ’ ಎಂದು ಅಧಿಕಾರಿಗಳು ಹೇಳಿದರು.

‘ಈತನನ್ನು ಮಾಲ್ಡಾ ಜಿಲ್ಲೆಯ ಗಡಿ ಪ್ರದೇಶದಲ್ಲಿ ಬಂಧಿಸಲಾಗಿದೆ. ಬಿಎಸ್‌ಎಫ್‌ ಸಿಬ್ಬಂದಿ, ಸ್ಥಳೀಯ ಪೊಲೀಸರು ಮತ್ತು ಗುಪ್ತಚರ ಇಲಾಖೆಯ ಅಧಿಕಾರಿಗಳು ಬಂಧಿತನನ್ನು ವಿಚಾರಿಸುತ್ತಿದ್ದಾರೆ.

ಆತನಿಂದ ಲ್ಯಾಪ್‌ಟಾಪ್‌, ಚೀನಾದ ಪಾಸ್‌ಪೋರ್ಟ್‌ ಮತ್ತು ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು