ಮಂಗಳವಾರ, ಜೂನ್ 28, 2022
25 °C

ವೀಸಾ ಹಗರಣ: ಕಾರ್ತಿ ಚಿದಂಬರಂ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಚೀನಾದ 263 ಮಂದಿಗೆ ವೀಸಾ ಕೊಡಿಸಿದ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕಾರ್ತಿ ಅವರು 2011ರಲ್ಲಿ ತಮ್ಮ ತಂದೆ ಚಿದಂಬರಂ ಅವರು ಗೃಹ ಸಚಿವರಾಗಿದ್ದ ಅವಧಿಯಲ್ಲಿ ಚೀನಾದ 263 ಮಂದಿಗೆ ವೀಸಾ ಕೊಡಿಸಿದ್ದರು. ಇದರಲ್ಲಿ ಕಾರ್ತಿ ಮತ್ತು ಅವರ ಆಪ್ತ ಎಸ್.ಭಾಸ್ಕರ ರಾಮನ್ ವಿರುದ್ಧ ₹50 ಲಕ್ಷ ಲಂಚ ಪಡೆಯಲಾಗಿದೆ ಎಂಬ ಆರೋಪವಿದ್ದು, ಅವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಸಿಬಿಐ ಎಫ್‌ಐಆರ್‌ ಆಧರಿಸಿ ಪಿಎಂಎಲ್‌ಎ ಅಡಿಯಲ್ಲಿ ಕಾರ್ತಿ ಮತ್ತು ಇತರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಹಗರಣ ಕುರಿತು ಇ.ಡಿ ತನಿಖೆ ನಡೆಸಲಿದೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲಾ ಆರೋಪಗಳನ್ನು ನಿರಾಕರಿಸಿರುವ ಕಾರ್ತಿ ಚಿದಂಬರಂ ಅವರು ‘ಇದು ಕಿರುಕುಳವಲ್ಲವೇ? ಇಲ್ಲದಿದ್ದರೆ ಮತ್ತೇನು?’ ಎಂದು ಪ್ರಶ್ನಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು