ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಪ್ಕೊ ಚಳವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಕೋವಿಡ್‌ನಿಂದ ನಿಧನ

Last Updated 21 ಮೇ 2021, 8:48 IST
ಅಕ್ಷರ ಗಾತ್ರ

ನವದೆಹಲಿ: ಖ್ಯಾತ ಪರಿಸರವಾದಿ ಹಾಗೂ ‘ಚಿಪ್ಕೊ ಚಳವಳಿ’ ಪ್ರವರ್ತಕ ಸುಂದರಲಾಲ್‌ ಬಹುಗುಣ ಅವರು ಕೋವಿಡ್‌–19ನಿಂದಾಗಿ ರಿಷಿಕೇಶದ ಏಮ್ಸ್‌ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಕೋವಿಡ್‌–19 ದೃಢಪಟ್ಟಿದ್ದರಿಂದ ಅವರನ್ನು ಮೇ 8ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಕಳೆದ ರಾತ್ರಿ ಅವರ ಆರೋಗ್ಯ ಬಿಗಡಾಯಿಸಿತು. ಆಮ್ಲಜನಕ ಮಟ್ಟ ಕುಸಿದ ಕಾರಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಯಿತು. ಚಿಕಿತ್ಸೆಗೆ ಸ್ಫಂದಿಸದೇ ಮಧ್ಯಾಹ್ನ 12.05ಕ್ಕೆ ಅವರು ಕೊನೆಯುಸಿರೆಳೆದರು’ ಎಂದು ಏಮ್ಸ್‌ ನಿರ್ದೇಶಕ ಡಾ.ರವಿಕಾಂತ್‌ ಹೇಳಿದರು.

ಬೃಹತ್‌ ಅಣೆಕಟ್ಟು, ಕೈಗಾರಿಕೆ ಮತ್ತು ರಸ್ತೆಗಳ ನಿರ್ಮಾಣಕ್ಕಾಗಿ ಅರಣ್ಯ ನಾಶ ಆಗುತ್ತಿರುವುದನ್ನು ತಡೆಯಲೆಂದು 1973ರಲ್ಲಿ ಚಿಪ್ಕೊ ಚಳವಳಿ ಆರಂಭವಾಗಿತ್ತು. ಉತ್ತರ ಪ್ರದೇಶದಲ್ಲಿ ಈ ಚಳವಳಿಗೆ ಪರಿಸರವಾದಿ ಸುಂದರ್‌ ಲಾಲ್‌ ಬಹುಗುಣ ನಾಂದಿ ಹಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT