ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಪರ ಚಿರಾಗ್ ಪಾಸ್ವಾನ್ ಪ್ರಚಾರ 

Last Updated 28 ಅಕ್ಟೋಬರ್ 2022, 14:36 IST
ಅಕ್ಷರ ಗಾತ್ರ

ಪಟ್ನಾ: ಸಂಸದ ಚಿರಾಗ್ ಪಾಸ್ವಾನ್ ಅವರನ್ನು ‘ಎನ್‌ಡಿಎ ಮಿತ್ರ’ ಎಂದು ಪ್ರತಿಪಾದಿಸಿರುವ ಬಿಜೆಪಿಯಬಿಹಾರ ಘಟಕದ ಅಧ್ಯಕ್ಷ ಸಂಜಯ್ ಜೈಸ್ವಾಲ್, ಬಿಹಾರದ ವಿಧಾನಸಭಾ ಉಪಚುನಾವಣೆಯಲ್ಲಿ ಪರಾಗ್ ಬಿಜೆಪಿ ಪರ ಪ್ರಚಾರ ನಡೆಸುವರು ಎಂದು ಶುಕ್ರವಾರ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮೊಕಮಾ ಮತ್ತು ಗೋಪಾಲ್‌ಗಂಜ್ ವಿಧಾನಸಭಾ ಕ್ಷೇತ್ರಗಳಿಗೆ ನ. 3ರಂದು ಉಪಚುನಾವಣೆ ನಡೆಯಲಿದ್ದು, ಮುಂದಿನ ವಾರ ಚಿರಾಗ್ ಅವರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ನಮ್ಮೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ ಹಾಗೂ ರಾಷ್ಟ್ರಪತಿ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲಾ ಪಕ್ಷಗಳನ್ನು ನಾವು ಎನ್‌ಡಿಎ ಪಾಲುದಾರರು ಎಂದು ಪರಿಗಣಿಸುತ್ತೇವೆ’ ಎಂದೂ ಜೈಸ್ವಾಲ್ ಹೇಳಿದ್ದಾರೆ. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT