ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದ ಅಮರಾವತಿಯಲ್ಲಿ ಕಾಲರಾ ಉಲ್ಬಣ: 5 ಸಾವು, 181 ಮಂದಿಯಲ್ಲಿ ರೋಗ ದೃಢ

Last Updated 14 ಜುಲೈ 2022, 2:20 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದ ಅಮರಾವತಿ ಜಿಲ್ಲೆಯಲ್ಲಿ ನೀರಿನಿಂದ ಹರಡುವ ಕಾಲರಾ ಸಾಂಕ್ರಾಮಿಕ ರೋಗ ಉಲ್ಬಣಗೊಂಡಿದೆ. ಈ ಮಾರಕ ಕಾಯಿಲೆಯಿಂದ ಈವರೆಗೆ ಐವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸಾರ್ವಜನಿಕ ಆರೋಗ್ಯ ಇಲಾಖೆಯ ಸಮಗ್ರ ರೋಗಗಳ ಕಣ್ಗಾವಲು ಕಾರ್ಯಕ್ರಮದಡಿ(ಐಡಿಎಸ್‌ಪಿ) ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಕಾಲರಾದಿಂದ ಐವರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ‘ಈ ವರೆಗೆ 181 ಮಂದಿಯಲ್ಲಿ ಕಾಲರ ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ’ಎಂದು ಐಡಿಎಸ್‌ಪಿ ಹೇಳಿದೆ. ಇದರಲ್ಲಿ ಇಬ್ಬರು ಮಹಿಳೆಯರೂ ಸೇರಿ 24–40 ವರ್ಷ ಒಳಗಿನ ಮೂವರು ಮತ್ತು 70 ವರ್ಷ ಮೇಲ್ಪಟ್ಟ ಇಬ್ಬರು ಅಸುನೀಗಿದ್ದಾರೆ.

ಈಗಾಗಲೇ ರಾಜ್ಯ ಮಟ್ಟದ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿದ್ದು, ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ. ಜುಲೈ 7ರಂದು ಜಿಲ್ಲೆಯ ಅಮರಾವತಿ ಮತ್ತು ಚಖಲ್ದಾರಾ ಬ್ಲಾಕ್‌ಗಳಲ್ಲಿ ರೋಗ ಸ್ಫೋಟಗೊಂಡಿತ್ತು.

ಚಿಖಲ್ದಾರಾ ಬ್ಲಾಕ್‌ನ ಡೊಂಗ್ರಿ, ಕೊಯ್ಲಾರಿ ಮತ್ತು ಘಾನಾ ಹಳ್ಳಿ ಮತ್ತು ಅಮರಾವತಿ ಬ್ಲಾಕ್‌ನ ಅಯಾ ಅಕೊಲಾ ಹಳ್ಳಿಗಳಲ್ಲಿ ಬಹುತೇಕ ಪ್ರಕರಣಗಳು ಪತ್ತೆಯಾಗಿವೆ. ಈ ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಈ ನಡುವೆಯೂ ವೈದ್ಯಕೀಯ ಸಿಬ್ಬಂದಿ 24 ಗಂಟೆಗಳ ಕಾಲ ರೋಗಪೀಡಿತ ಹಳ್ಳಿಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರೋಗ ಪತ್ತೆ, ಚಿಕಿತ್ಸೆ ಮತ್ತೆ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT