ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಪ್ಟರ್‌ ದುರಂತದಲ್ಲಿ ಬದುಕುಳಿದ ವರುಣ್‌ ಸಿಂಗ್‌ ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ

Last Updated 9 ಡಿಸೆಂಬರ್ 2021, 6:26 IST
ಅಕ್ಷರ ಗಾತ್ರ

ಚೆನ್ನೈ: ಕ್ಯಾಪ್ಟರ್‌ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಗ್ರೂಪ್‌ ಕ್ಯಾಪ್ಟನ್‌ ವರುಣ್‌ ಸಿಂಗ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ.

‘ವರುಣ್‌ ಸಿಂಗ್‌ ಅವರ ಪರಿಸ್ಥಿತಿ ಗಂಭೀರವಾಗಿದೆ. ಆದರೂ ಸ್ಥಿರವಾಗಿದೆ. ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಅಗತ್ಯವಿದ್ದರೆ ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಿಂದ, ಬೆಂಗಳೂರಿನ ಕಮಾಂಡ್‌ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರ ಮಾಡಲಾಗುವುದು,’ ಎಂದು ಮೂಲಗಳ ಮಾಹಿತಿ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ವರುಣ್‌ ಸಿಂಗ್‌ ಅವರ ಸ್ಥಿತಿಯ ಬಗ್ಗೆ ರಾಜ್ಯಸಭೆಗೆ ಗುರುವಾರ ಮಾಹಿತಿ ಒದಗಿಸಿದರು. ವೆಲ್ಲಿಂಗ್ಟನ್‌ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವರುಣ್‌ ಸಿಂಗ್‌ ಅವರು ಜೀವ ರಕ್ಷಕ ವ್ಯವಸ್ಥೆಯಲ್ಲಿದ್ದಾರೆ. ಅವರನ್ನು ಉಳಿಸಿಕೊಳ್ಳಲು ಸರ್ವ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ,’ ಎಂದು ಅವರು ತಿಳಿಸಿದರು.

ದುರಂತದಲ್ಲಿ ಮಡಿದವರಿಗೆ ರಾಜ್ಯಸಭೆಯಲ್ಲಿ ಎರಡು ನಿಮಿಷಗಳ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಅಂತ್ಯಕ್ರಿಯೆಯನ್ನು ಸಕಲ ಮಿಲಿಟರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ರಕ್ಷಣಾ ಸಚಿವರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT