ಬುಧವಾರ, ಮಾರ್ಚ್ 22, 2023
24 °C

ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್‌ ಹಿಪ್ಕಿನ್ಸ್ ಆಯ್ಕೆ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನೂತನ ಪ್ರಧಾನಿ ಅಭ್ಯರ್ಥಿಯಾಗಿ ಕ್ರಿಸ್ ಹಿಪ್ಕಿನ್ಸ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಡಳಿತಾರೂಢ ಲೇಬರ್‌ ಪಕ್ಷದ ಮೂಲಗಳು ತಿಳಿಸಿವೆ.

44 ವರ್ಷದ ಕ್ರಿಸ್ ಹಿಪ್ಕಿನ್ಸ್ ಅವರು ಪ್ರಸ್ತುತ ಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ರಿಸ್‌ ಅವರ ಆಯ್ಕೆಗೆ ಸಂಸತ್‌ನಲ್ಲಿ ಅನುಮೋದನೆ ದೊರೆಯಬೇಕಿದೆ. ನಂತರ, ಅವರು ದೇಶದ 41ನೇ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುವರು ಎಂದು ಮೂಲಗಳು ತಿಳಿಸಿವೆ.

ಜಸಿಂಡ ಆರ್ಡರ್ನ್ ಅವರು ಪ್ರಧಾನಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಘೋಷಿಸಿದ ಬಳಿಕ, ಲೇಬರ್‌ ಪಕ್ಷ ಹಿಪ್ಕಿನ್ಸ್ ಅವರನ್ನು ಆಯ್ಕೆ ಮಾಡಿದೆ. ಅಕ್ಟೋಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು