ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಹಿತಿ ಸೋರಿಕೆ: ಸಿಐಡಿ ತನಿಖೆ

Last Updated 15 ಸೆಪ್ಟೆಂಬರ್ 2021, 21:05 IST
ಅಕ್ಷರ ಗಾತ್ರ

ಭುವನೇಶ್ವರ/ಬಾಲಸೋರ್‌: ಒಡಿಶಾದ ಚಾಂಡೀಪುರದಲ್ಲಿರುವ ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ(ಡಿಆರ್‌ಡಿಒ) ‘ಐಟಿಆರ್‌’ ಪರೀಕ್ಷಾ ಕೇಂದ್ರದಲ್ಲಿನ ರಹಸ್ಯ ಮಾಹಿತಿಗಳು ಸೋರಿಕೆಯಾಗಿವೆ ಎನ್ನಲಾದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ಮಂಗಳವಾರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ನಾಲ್ವರನ್ನು ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿತ್ತು. ವಿದೇಶಿ ಏಜೆಂಟರಿಗೆ ಮಾಹಿತಿಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಪ್ರಕರಣದಲ್ಲಿ ಹನಿ ಟ್ರ್ಯಾಪ್‌ ಸಹ ನಡೆದಿರುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಬಾಲಸೋರ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧಾನ್ಸು ಶೇಖರ್‌ ಮಿಶ್ರಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT