ಶನಿವಾರ, ಮೇ 15, 2021
22 °C

ಪಶ್ಚಿಮ ಬಂಗಾಳ ಚುನಾವಣೆ: ಕೂಚ್ ಬಿಹಾರ್ ಘರ್ಷಣೆಯ ತನಿಖೆ ಕೈಗೆತ್ತಿಕೊಂಡ ಸಿಐಡಿ

ಪಿಟಿಐ‌ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಕೂಚ್‌ ಬಿಹಾರ್‌ನ ಸೀತಾಲಕುಚಿಯಲ್ಲಿ ಮತದಾನದ ಸಂದರ್ಭ ಸಿಐಎಸ್‌ಎಫ್‌ (ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟ ಬಗ್ಗೆ ಪಶ್ಚಿಮ ಬಂಗಾಳ ಸಿಐಡಿ ತನಿಖೆ ಕೈಗೆತ್ತಿಕೊಂಡಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನಿಖೆಗಾಗಿ ಅಪರಾಧ ತನಿಖಾ ದಳವು (ಸಿಐಡಿ) ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ತನಿಖಾ ತಂಡವು ಸೀತಾಲಕುಚಿಯ ಜೋರ್‌ಪಕ್ತಿಯಲ್ಲಿನ 126/5ನೇ ಮತಗಟ್ಟೆಗೆ ಭೇಟಿ ನೀಡಲಿದೆ. ಸಾಕ್ಷಿಗಳಿಂದ ಮಾಹಿತಿ ಕಲೆಹಾಕಲಿರುವ ತನಿಖಾ ತಂಡವು ವಿಡಿಯೊ ದೃಶ್ಯಾವಳಿಯನ್ನೂ ಪರಿಶೀಲಿಸಲಿದೆ. ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊದ ಸತ್ಯಾಸತ್ಯತೆ ಅರಿಯಲು ವಿಧಿವಿಜ್ಞಾನ ಪ್ರಯೋಗಕ್ಕೂ ಕಳುಹಿಸಿಕೊಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಓದಿ: ಪಶ್ಚಿಮ ಬಂಗಾಳ: ಕೂಚ್‌ ಬಿಹಾರ್ ಘರ್ಷಣೆಯಲ್ಲಿ ಐವರು ಸಾವು, ಮತದಾನ ಮುಂದೂಡಿಕೆ

ಘಟನೆ ನಡೆದ ಬಳಿಕ ಸ್ಥಳಕ್ಕೆ ಧಾವಿಸಿದ್ದ ಸ್ಥಳೀಯ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಂದಲೂ ತನಿಖಾ ತಂಡ ಮಾಹಿತಿ ಕಲೆಹಾಕಲಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯ ನಾಲ್ಕನೇ ಹಂತದ ಮತದಾನದ ಸಂದರ್ಭ ಸೀತಾಲಕುಚಿ ಕ್ಷೇತ್ರದ 126ನೇ ಸಂಖ್ಯೆಯ ಮತಗಟ್ಟೆಯಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿ ‘ಸ್ವರಕ್ಷಣೆ’ಗಾಗಿ ನಡೆಸಿದ ಗೋಲಿಬಾರ್‌ನಲ್ಲಿ ನಾಲ್ವರು ಮೃತಪಟ್ಟಿದ್ದರು. ಬಳಿಕ ಮತದಾನ ಮುಂದೂಡಿಕೆ ಮಾಡಲಾಗಿತ್ತು. ಘಟನೆಯು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು