ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಐಎಸ್‌ಸಿಇ: 10,12ನೇ ತರಗತಿ ಆಫ್‌ಲೈನ್ ಪರೀಕ್ಷೆ ನಿಗದಿ

Last Updated 23 ಅಕ್ಟೋಬರ್ 2021, 15:10 IST
ಅಕ್ಷರ ಗಾತ್ರ

ನವದೆಹಲಿ: ಕೌನ್ಸಿಲ್‌ ಫಾರ್‌ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್‌ (ಸಿಐಎಸ್‌ಸಿಇ) 10 ಮತ್ತು 12ನೇ ತರಗತಿಯ ಮೊದಲ ಅವಧಿಯ ಪರೀಕ್ಷೆಗಳನ್ನು ಆಫ್‌ಲೈನ್‌ನಲ್ಲಿ ನಡೆಸಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.

10ನೇ ತರಗತಿಯ ಐಸಿಎಸ್‌ಇ ಪರೀಕ್ಷೆಗಳು ನವೆಂಬರ್ 29ರಿಂದ ಡಿಸೆಂಬರ್‌ 16ರವರೆಗೆ ಮತ್ತು 12ನೇ ತರಗತಿ ಪರೀಕ್ಷೆಗಳು (ಐಎಸ್‌ಸಿ) ನವೆಂಬರ್ 12ರಿಂದ ಡಿಸೆಂಬರ್‌ 20ರವರೆಗೆ ನಡೆಯಲಿವೆ.

10 ಹಾಗೂ 12ನೇ ತರಗತಿಯ ಮೊದಲ ಅವಧಿಯ ಪರೀಕ್ಷೆಗಳು ಕ್ರಮವಾಗಿ ನವೆಂಬರ್ 15 ಮತ್ತು 16ರಿಂದ ಆರಂಭವಾಗಬೇಕಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಪರೀಕ್ಷೆಗಳನ್ನು ಸಿಐಎಸ್‌ಸಿಇ ಮುಂದೂಡಿತ್ತು.

‘ಮೊದಲ ಅವಧಿಯ ಪರೀಕ್ಷೆಗಳನ್ನು ಆನ್‌ಲೈನ್‌ನಲ್ಲಿ ನಡೆಸಲು ಹಲವು ಅಡೆತಡೆಗಳಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ ಶಾಲೆಗಳ ಮುಖ್ಯಸ್ಥರು, ಪೋಷಕರು ಮತ್ತು ವಿದ್ಯಾರ್ಥಿಗಳು ಸಿಐಎಸ್‌ಸಿಇಗೆ ಹಲವು ಮೇಲ್‌ಗಳನ್ನು ಕಳುಹಿಸಿದ್ದರು’ ಎಂದು ಸಿಐಎಸ್‌ಸಿಇ ಮುಖ್ಯ ಕಾರ್ಯನಿರ್ವಾಹಕ ಗೆರ್ರಿ ಅರಾಥೂನ್ ಹೇಳಿದರು.

‘ವಿದ್ಯಾರ್ಥಿಗಳು ಮತ್ತು ಪೋಷಕರು ಉಲ್ಲೇಖಿಸಿರುವಅನಿಯಮಿತ ವಿದ್ಯುತ್ ಸರಬರಾಜು, ನೆಟ್‌ವರ್ಕ್ ಮತ್ತು ಬ್ಯಾಂಡ್‌ವಿಡ್ತ್ ಸಮಸ್ಯೆಗಳ ಕಾರಣದಿಂದಾಗಿ ಆನ್‌ಲೈನ್ ಪರೀಕ್ಷೆಗಳನ್ನು ಕೈಬಿಡಲಾಗಿದೆ. ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ಆಫ್‌ಲೈನ್ ಮೋಡ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು’ ಎಂದು ಅರಾಥೂನ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT