ಶ್ರೀನಗರ: ಉಗ್ರರ ಗುಂಡಿನ ದಾಳಿ– ಓರ್ವ ನಾಗರಿಕ, ಪೊಲೀಸ್ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಒಬ್ಬ ನಾಗರಿಕ ಮೃತಪಟ್ಟು, ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ.
ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟ ನಾಗರಿಕನನ್ನು ರೌಫ್ ಅಹ್ಮದ್ ಖಾನ್ ಎಂದು ಗುರುತಿಸಲಾಗಿದೆ. ಶ್ನೀನಗರದ ರಯ ಹೊರಗಡೆ ನಿಂತಿದ್ದ ನಾಗರಿಕನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಘಟನಾ ಸ್ಥಳಕ್ಕೆ ತೆರಳಿರುವ ಹೆಚ್ಚುವರಿ ಸೇನಾ ಸಿಬ್ಬಂದಿ ದಾಳಿಕೋರರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.
‘ಮರ್ಜನ್ಪುರದಲ್ಲಿ ರೌಫ್ ಅಹ್ಮದ್ ಎಂಬವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದೆವು. ಆದರೆ, ದುರಾದೃಷ್ಟವಶಾತ್ ಅವರು ಉಳಿಯಲಿಲ್ಲ’ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಿಜ್ಬೆಹಾರಾದಲ್ಲಿ ಉಗ್ರರ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎಎಸ್ಐ ಒಬ್ಬರು ಹುತಾತ್ಮರಾಗಿದ್ದಾರೆ.
ಉಗ್ರರ ಗುಂಡಿನ ದಾಳಿಯಲ್ಲಿ ಎಎಸ್ಐ ಮೊಹಮ್ಮದ್ ಅಶ್ರಫ್ ಅವರ ಎದೆ ಮತ್ತು ಕುತ್ತಿಗಗೆ ಎರಡು ಬುಲೆಟ್ ಹೊಕ್ಕಿದ್ದವು. ಸ್ಥಳೀಯ ಆರೋಗ್ಯ ಕೆಂದ್ರ ದಾಖಲಿಸಲಾಗಿತ್ತು. ಬಳಿಕ, ಹೆಚ್ಚಿನ ಚಿಕಿತ್ಸೆ ಶ್ರೀನಗರದ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ ಎಂದು ಪೊಲಿಸರು ತಿಳಿಸಿದ್ಧಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.