ಶನಿವಾರ, ನವೆಂಬರ್ 27, 2021
21 °C

ಶ್ರೀನಗರ: ಸೇಲ್ಸ್‌ಮನ್ ಅನ್ನು ಗುಂಡಿಟ್ಟು ಕೊಂದ ಉಗ್ರರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ನಗರದಲ್ಲಿ ಸೋಮವಾರ ಸಂಜೆ ಸೇಲ್ಸ್‌ಮನ್ ಒಬ್ಬರನ್ನು ಉಗ್ರರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ ನಗರದ ಬೊಹ್ರಿ ಪ್ರದೇಶದಲ್ಲಿ ಘಟನೆ ನಡೆದಿದೆ.

'ಮೊಹಮ್ಮದ್ ಖಾನ್ ಎಂಬುವವರ ಮೇಲೆ ಉಗ್ರರು ಗುಂಡು ಹಾರಿಸಿದ್ದಾರೆ. ಖಾನ್ ಬಂಡಿಪೋರಾದವರಾಗಿದ್ದು, ಸೇಲ್ಸ್‌ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಗುಂಡಿನ ದಾಳಿ ನಡೆದ ಬಳಿಕ ಕೂಡಲೇ ಖಾನ್ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಗಂಭೀರ ಗಾಯಗಳಿಂದ ಬಳಲುತ್ತಿದ್ದ ಅವರು ಮೃತಪಟ್ಟರು' ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆ ಬಳಿಕ ಆ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಕಳೆದ ತಿಂಗಳು ಕಾಶ್ಮೀರದಾದ್ಯಂತ ಅಲ್ಪಸಂಖ್ಯಾತರು ಮತ್ತು ವಲಸಿಗರು ಸೇರಿದಂತೆ 11 ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು