ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾದೇಶಿಕ ಭಾಷೆಯಲ್ಲಿ ಸುಪ್ರೀಂ ತೀರ್ಪು: ಮೋದಿ ಶ್ಲಾಘನೆ

Last Updated 22 ಜನವರಿ 2023, 14:31 IST
ಅಕ್ಷರ ಗಾತ್ರ

ನವದೆಹಲಿ : ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ಮಾಡಲು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ಅವರು ಒತ್ತು ನೀಡಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶ್ಲಾಘಿಸಿದ್ದಾರೆ.

ಮುಂಬೈನಲ್ಲಿ ಮಹಾರಾಷ್ಟ್ರ ಮತ್ತು ಗೋವಾದ ಬಾರ್ ಕೌನ್ಸಿಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಜೆಐ ಮಾಡಿದ ಭಾಷಣದ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಮೋದಿ, ‘ಇತ್ತೀಚಿನ ಸಮಾರಂಭದಲ್ಲಿ, ಸಿಜೆಐ ಡಿ.ವೈ.ಚಂದ್ರಚೂಡ್ ಅವರು ಪ್ರಾದೇಶಿಕ ಭಾಷೆಗಳಲ್ಲಿ ಸುಪ್ರೀಂ ತೀರ್ಪುಗಳು ಲಭ್ಯವಾಗುವಂತೆ ಕೆಲಸ ಮಾಡುವ ಅಗತ್ಯತೆಯ ಕುರಿತು ಮಾತನಾಡಿದರು. ಅವರು ತಂತ್ರಜ್ಞಾನವನ್ನು ಬಳಸಲು ಸಲಹೆ ನೀಡಿದರು. ಇದು ಶ್ಲಾಘನೀಯ ಚಿಂತನೆಯಾಗಿದ್ದು, ಇದರಿಂದ ಅನೇಕರಿಗೆ ಸಹಾಯವಾಗುತ್ತದೆ. ವಿಶೇಷವಾಗಿ ಯುವಕರಿಗೆ ಹೆಚ್ಚು ಸಹಕಾರಿಯಾಗಿದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಭಾರತವು ಹಲವಾರು ಭಾಷೆಗಳನ್ನು ಹೊಂದಿದೆ, ಇದು ನಮ್ಮ ಸಾಂಸ್ಕೃತಿಕ ಕಂಪನ್ನು ಪಸರಿಸುತ್ತದೆ. ಎಂಜಿನಿಯರಿಂಗ್ ಮತ್ತು ವೈದ್ಯಕೀಯದಂತಹ ವಿಷಯಗಳನ್ನು ಮಾತೃ ಭಾಷೆಯಲ್ಲಿ ಅಧ್ಯಯನ ಮಾಡುವ ಆಯ್ಕೆಯನ್ನು ನೀಡುವುದು ಸೇರಿದಂತೆ ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಹಲವಾರು ಕ್ರಮ ಕೈಗೊಳ್ಳುತ್ತಿದೆ’ ಎಂದು ಮೋದಿ ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ಭಾಷೆಗಳಲ್ಲಿ ನ್ಯಾಯಾಂಗ ತೀರ್ಪುಗಳನ್ನು ಲಭ್ಯವಾಗುವಂತೆ ಮಾಡಿ, ಇದು ಸಾಮಾನ್ಯ ಜನರಿಗೆ ಸಿಗುವಂತೆ ಆಗಬೇಕು ಎಂದು ಈ ಹಿಂದೆ ಪ್ರಧಾನಿ ಮೋದಿ ಸಲಹೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT