ಮಂಗಳವಾರ, ಸೆಪ್ಟೆಂಬರ್ 28, 2021
25 °C

ಆಂಧ್ರ–ತೆಲಂಗಾಣ ನದಿ ವಿವಾದ: ಮಧ್ಯಸ್ಥಿಕೆ ಮೂಲಕ ಪರಿಹರಿಕೊಳ್ಳಲು ’ಸುಪ್ರೀಂ’ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೃಷ್ಣಾ ನದಿ ನೀರು ಹಂಚಿಕೆ ವಿವಾದವನ್ನು ಮಧ್ಯಸ್ಥಿಕೆ ಮೂಲಕ ಆಂಧ್ರಪ್ರದೇಶ ಮತ್ತು ತೆಲಂಗಾಣ ಪರಿಹರಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ್‌ ಸಲಹೆ ನೀಡಿದ್ದಾರೆ.

‘ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳಿಗೆ ಹಂಚಿಕೆಯಾಗಬೇಕಾದ ನೀರನ್ನು ತೆಲಂಗಾಣ ಅಸಂವಿಧಾನಿಕವಾಗಿ ಮತ್ತು ಕಾನೂನುಬಾಹಿರವಾಗಿ ತಡೆಯುತ್ತಿದೆ’ ಎಂದು ಆಂಧ್ರಪ್ರದೇಶ ದೂರು ಸಲ್ಲಿಸಿತ್ತು.

ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ, ’ನಾನು ಎರಡು ರಾಜ್ಯಗಳಿಗೆ ಸಂಬಂಧಪಟ್ಟಿದ್ದೇನೆ. ಹೀಗಾಗಿ, ಈ ವಿಷಯದ ಬಗ್ಗೆ ಕಾನೂನು ಪ್ರಕಾರ ವಿಚಾರಣೆ ನಡೆಸುವುದಿಲ್ಲ. ಮಧ್ಯಸ್ಥಿಕೆ ಮೂಲಕ ಇತ್ಯರ್ಥಗೊಳಿಸಲು ದಯವಿಟ್ಟು ಪ್ರಯತ್ನಿಸಿ. ಇದಕ್ಕೆ ನೆರವು ನೀಡಲು ಸಿದ್ಧ. ಇಲ್ಲದಿದ್ದರೆ ಈ ಪ್ರಕರಣವನ್ನು ಮತ್ತೊಂದು ಪೀಠಕ್ಕೆ ವರ್ಗಾಯಿಸುತ್ತೇನೆ’ ಎಂದು ಹೇಳಿದರು.

ಈ ಬಗ್ಗೆ ಮುಂದಿನ ಸೂಚನೆ ಪಡೆಯಲು ಕಾಲಾವಕಾಶ ನೀಡಬೇಕು ಎಂದು ಆಂಧ್ರಪ್ರದೇಶದ ಸರ್ಕಾರದ ಪರ ವಕೀಲ ದುಷ್ಯಂತ್‌ ದಾವೆ ನ್ಯಾಯಾಲಯಕ್ಕೆ ಕೋರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು