ಭಾನುವಾರ, ಏಪ್ರಿಲ್ 2, 2023
23 °C

ಜಾರ್ಖಂಡ್‌: ಪೊಲೀಸರು –ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ರಾಂಚಿ: ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವೆ ಘರ್ಷಣೆ ನಡೆದಿದೆ.

ಜಿಲ್ಲೆಯ ಮನಾಟು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಯನ್ನು ಕಂಡು ಮಾವೋವಾದಿಗಳು ಗುಂಡಿನ ದಾಳಿ ಆರಂಭಿಸಿದರು. ಅದಕ್ಕೆ ಪ್ರತಿಯಾಗಿ ಎನ್‌ಕೌಂಟರ್‌ ನಡೆಸಲಾಗಿದೆ. ಘಟನಾ ಸ್ಥಳದಲ್ಲಿ ಏರ್ ಗನ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

ಸುಮಾರು 15 ರಿಂದ 20 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಮಾವೋವಾದಿ ಸಂಘಟನೆಯ ನಾಯಕ ಶಶಿಕಾಂತ್ ಕಾಣಿಸಿಕೊಂಡಿದ್ದಾರೆ. ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.

ಇದನ್ನು ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು