ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ 10 ಮತ್ತು 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ನಕಲಿ ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಭಾನುವಾರ ಸ್ಪಷ್ಟಪಡಿಸಿದೆ.
‘ಮಂಡಳಿಯು ಶೀಘ್ರದಲ್ಲಿಯೇ ಅಧಿಕೃತ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತ ಮಾಹಿತಿಗೆ ಕಾಯಬೇಕು’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಮೊದಲು 2023 ಫೆ.15ರಿಂದ 10 ಮತ್ತು 12ನೇ ತರಗತಿಯ ಥಿಯರಿ ಪರೀಕ್ಷೆಗಳನ್ನು ಆರಂಭಿಸುವುದಾಗಿ ಮಂಡಳಿ ಪ್ರಕಟಿಸಿತ್ತು.
‘ಪ್ರಾಯೋಗಿಕ ಪರೀಕ್ಷೆಗಳು ಜನವರಿ 1ರಿಂದ ಆರಂಭವಾಗಲಿವೆ. ಇವುಗಳ ಪಠ್ಯವನ್ನು ಅಷ್ಟರೊಳಗೆ ಮುಗಿಸಲು ಶಾಲೆಗಳಿಗೆ ಸೂಚನೆ ನೀಡಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.