ಮಂಗಳವಾರ, ಮಾರ್ಚ್ 28, 2023
31 °C

ದೆಹಲಿಯಲ್ಲಿ ಗುಂಪು ಘರ್ಷಣೆ: 12ನೇ ತರಗತಿ ವಿದ್ಯಾರ್ಥಿ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಆಗ್ನೇಯ ದೆಹಲಿಯ ಓಖಲಾ ಪ್ರದೇಶದಲ್ಲಿ ವಿದ್ಯಾರ್ಥಿ ಗುಂಪುಗಳ ನಡುವೆ ನಡೆದ ಜಗಳದಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ’ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ.

‘ಮೃತಪಟ್ಟ ವಿದ್ಯಾರ್ಥಿಯು ಓಖಲಾದ 2ನೇ ಹಂತದ ಜೆಜೆ ಕ್ಯಾಂಪ್‌ನ ನಿವಾಸಿಯಾಗಿದ್ದು, ಕಾಲ್ಕಾಜಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ’ ಎಂದು ಅವರು ತಿಳಿಸಿದ್ದಾರೆ.

‘ಹಂಸ್‌ರಾಜ್‌ ಸೇಥಿ ಉದ್ಯಾನದ ಬಳಿ ಜಗಳ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಯ ಎದೆಗೆ ಚಾಕುವಿನಿಂದ ಇರಿಯಲಾಗಿತ್ತು.  ಈ ಕುರಿತಂತೆ ಭಾರತೀಯ ದಂಡ ಸಂಹಿತೆ 302ರ (ಹತ್ಯೆ) ಅಡಿ ಪ್ರಕರಣ ದಾಖಲಿಸಲಾಗಿದೆ’ ಎಂದೂ ಅವರು ಹೇಳಿದ್ದಾರೆ.

‘ಘರ್ಷಣೆ ನಡೆದ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು ದುಷ್ಕರ್ಮಿಗಳ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು