ಶುಕ್ರವಾರ, ಡಿಸೆಂಬರ್ 3, 2021
20 °C

ರಾಜಸ್ಥಾನ: ಮನೆಗೆಲಸ ಮಾಡಲಿಲ್ಲವೆಂದು ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ: ರಾಜಸ್ಥಾನದ ಚುರು ಜಿಲ್ಲೆಯ ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಘಟನೆಯ ಬಗ್ಗೆ ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋಟಸ್ರಾ ದುಃಖ ವ್ಯಕ್ತಪಡಿಸಿದ್ದು, ಶಾಲೆಯ ಮಾನ್ಯತೆ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

13 ವರ್ಷದ ಮೃತ ವಿದ್ಯಾರ್ಥಿ ಗಣೇಶ್, ಖಾಸಗಿ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ತಮ್ಮ ಮನೆಗೆಲಸವನ್ನು ಪೂರ್ಣಗೊಳಿಸಿಲ್ಲವೆಂದು ಶಿಕ್ಷಕರು ಆತನ ಮೇಲೆ ತೀವ್ರವಾಗಿ ಥಳಿಸಿದ್ದಾರೆ ಎಂದು ಸಲಸಾರ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ವಿಷ್ಣೋಯ್ ಹೇಳಿದ್ದಾರೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದರು ಎಂದು ವಿಷ್ಣೋಯ್ ಹೇಳಿದ್ದಾರೆ.

ಆರೋಪಿ ಶಿಕ್ಷಕ ಮನೋಜ್ (35) ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಲಾಗಿದೆ ಎಂದು ಅವರು ಹೇಳಿದರು.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತನಿಖೆ ಮುಗಿಯುವವರೆಗೂ ಶಾಲೆಯ ಮಾನ್ಯತೆಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ಎಂದು ಶಿಕ್ಷಣ ಸಚಿವ ದೋಟಸ್ರಾ ಟ್ವೀಟ್ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು