ಗುರುವಾರ , ಆಗಸ್ಟ್ 5, 2021
22 °C

ಸಿಬಿಎಸ್‌ಇ: 10, 12ನೇ ತರಗತಿ ಖಾಸಗಿ ಅಭ್ಯರ್ಥಿಗಳಿಗೆ ಆ.16ರಿಂದ ಪರೀಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 10 ಮತ್ತು 12ನೇ ತರಗತಿಯ ಖಾಸಗಿ ಅಭ್ಯರ್ಥಿಗಳಿಗೆ ಆಗಸ್ಟ್‌ 16ರಿಂದ ಸೆಪ್ಟೆಂಬರ್‌ 15ರೊಳಗೆ ಪರೀಕ್ಷೆಗಳನ್ನು ನಡೆಸುವುದಾಗಿ ಬುಧವಾರ ಪ್ರಕಟಿಸಿದೆ.

ಈ ಪರೀಕ್ಷಾರ್ಥಿಗಳ ಹಿಂದಿನ ಮೌಲ್ಯಮಾಪನ ದಾಖಲೆಗಳು ಮಂಡಳಿ ಬಳಿ ಇಲ್ಲದ ಕಾರಣ, ಅವರಿಗೆ ಪರ್ಯಾಯ ಮೌಲ್ಯಮಾಪನ ನೀತಿಯ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲು ಆಗದು ಎಂದು ಮಂಡಳಿ ಸ್ಪಷ್ಟಪಡಿಸಿದೆ.

ಈ ಅಭ್ಯರ್ಥಿಗಳ ಪರೀಕ್ಷೆ ಮುಗಿದ ಕೆಲವೇ ದಿನಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಈ ಮೂಲಕ ಅವರಿಗೆ ಉನ್ನತ ಶಿಕ್ಷಣ ಪ್ರವೇಶಕ್ಕೆ ತೊಂದರೆ ಆಗದಂತೆ ಎಚ್ಚರವಹಿಸಲಾಗು ವುದು ಎಂದು ಮಂಡಳಿಯ ಪರೀಕ್ಷಾ ಮೇಲ್ವಿಚಾರಕರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು