ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯನ್ನು ಸೋಲಿಸಲು ಜಾಣ ನಡೆ ಅಗತ್ಯ: ಶಿವಸೇನಾ

Last Updated 23 ಆಗಸ್ಟ್ 2021, 9:27 IST
ಅಕ್ಷರ ಗಾತ್ರ

ಮುಂಬೈ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಚುರುಕು ಹಾಗೂ ಜಾಣ ನಡೆ ಅಗತ್ಯ ಎಂದು ಶಿವಸೇನಾ ಹೇಳಿದೆ.

ರಾಜಕೀಯ ಚದುರಂಗದ ಆಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ತಡೆಹಿಡಿಯಬಹುದು ಎಂಬುದನ್ನು ಮಹಾರಾಷ್ಟ್ರ ಹಾಗೂ ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶಗಳು ತೋರಿಸಿಕೊಟ್ಟಿವೆ ಎಂದು ತಿಳಿಸಿದೆ.

ಬಿಜೆಪಿ ವಿರುದ್ಧ ಹೋರಾಡಲು ಬಲವಾದ ಇಚ್ಛಾಶಕ್ತಿ ಅಗತ್ಯ ಎಂದು ಪಕ್ಷದ ಮುಖವಾಣಿ 'ಸಾಮ್ನಾ' ಸಂಪಾದಕೀಯದಲ್ಲಿ ಉಲ್ಲೇಖಿಸಿದೆ.

2019ರಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ ಮುಖ್ಯಮಂತ್ರಿ ಸ್ಥಾನ ಹಂಚಿಕೊಳ್ಳುವ ವಿಚಾರದಲ್ಲಿ ಶಿವಸೇನೆ ಹಾಗೂ ಬಿಜೆಪಿ ನಡುವಣ ಮೈತ್ರಿ ಮುರಿದುಬಿತ್ತು. ಬಳಿಕ ಎನ್‌ಸಿಪಿ ಹಾಗೂ ಕಾಂಗ್ರೆಸ್ ಜೊತೆ ಸೇರಿಕೊಂಡು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಿತ್ತು.

ಅತ್ತ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತೆ ಬಿಜೆಪಿ ಲೆಕ್ಕಾಚಾರಗಳನ್ನೆಲ್ಲ ತಲೆಕೆಳಗಾಗಿಸಿ ಭರ್ಜರಿ ಗೆಲುವು ದಾಖಲಿಸಿತ್ತು.

ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 19 ರ‍್ಯಾಲಿಗಳನ್ನು ಹಮ್ಮಿಕೊಂಡಿದ್ದರು. ಗೃಹ ಸಚಿವ ಅಮಿತ್ ಶಾ ರಾಜಕೀಯ ಯೋಜನೆ, ಹಣಕಾಸು ನಿರ್ವಹಣೆಯ ಹೊರತಾಗಿಯೂ ಸೋಲು ಎದುರಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT