ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತಿಮ ಹಂತದಲ್ಲಿ ಮಕ್ಕಳ ಕೋವಿಡ್‌ ಲಸಿಕೆಯ ಕ್ಲಿನಿಕಲ್‌ ಪ್ರಯೋಗ: ಕೇಂದ್ರ

Last Updated 16 ಜುಲೈ 2021, 10:34 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ 18 ವರ್ಷದೊಳಗಿನ ಮಕ್ಕಳ ಕೋವಿಡ್‌–19ರ ಲಸಿಕೆಗಳ ಕ್ಲಿನಿಕಲ್‌ ಪ್ರಯೋಗಗಳು ನಡೆಯುತ್ತಿದ್ದು, ಪೂರ್ಣಗೊಳ್ಳುವ ಹಾದಿಯಲ್ಲಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ಸರ್ಕಾರ ನೀತಿ ರೂಪಿಸಲಿದ್ದು, ತಜ್ಞರು ಅನುಮತಿ ನೀಡಿದಾಗ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದು ತಿಳಿಸಿದೆ.

ಈ ಕುರಿತು ಸಲ್ಲಿಕೆಯಾಗಿರುವ ಪಿಐಎಲ್‌ನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ನ್ಯಾಯಪೀಠ, ‘ಪ್ರಯೋಗಗಳು ನಡೆಯಬೇಕು, ಪ್ರಯೋಗಗಳಿಲ್ಲದೇ ಮಕ್ಕಳಿಗೆ ಲಸಿಕೆ ನೀಡಿದರೆ ವಿಪತ್ತು ಎದುರಾಗಬಹುದು’ ಎಂದು ಅಭಿಪ್ರಾಯಪಟ್ಟಿತು.

‘ಇಡೀ ದೇಶವೇ ಮಕ್ಕಳ ಲಸಿಕೆಗಾಗಿ ಕಾಯುತ್ತಿದೆ. ಹಾಗಾಗಿ ಪ್ರಯೋಗಗಳು ಮುಗಿದ ನಂತರ ಬೇಗನೇ ಮಕ್ಕಳಿಗೆ ಲಸಿಕೆ ನೀಡಿರಿ’ ಎಂದು ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 6ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT