ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಫಾ: ಬಾಲಕನ ನಿಕಟ ಸಂಪರ್ಕಕ್ಕೆ ಬಂದವರ ಪರೀಕ್ಷಾ ವರದಿ ನೆಗೆಟಿವ್‌- ವೀಣಾ ಜಾರ್ಜ್

Last Updated 7 ಸೆಪ್ಟೆಂಬರ್ 2021, 6:39 IST
ಅಕ್ಷರ ಗಾತ್ರ

ಕೋಯಿಕ್ಕೋಡ್‌: ನಿಫಾ ವೈರಾಣು ಸೋಂಕಿನಿಂದ ಮೃತಪಟ್ಟ 12 ವರ್ಷದ ಬಾಲಕನ ನಿಕಟ ಸಂಪರ್ಕದಲ್ಲಿದ್ದವರ ಪರೀಕ್ಷಾ ವರದಿ ಮಂಗಳವಾರ ಬಂದಿದ್ದು ನೆಗೆಟಿವ್‌ ಇರುವುದರಿಂದ ಕೇರಳದ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌, ಬಾಲಕನ ಪೋಷಕರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಬಾಲಕನ ನಿಕಟ ಸಂಪರ್ಕಕ್ಕೆ ಬಂದ 8 ಮಂದಿಯ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಇವರಲ್ಲಿ ಸೋಂಕಿನ ಲಕ್ಷಣಗಳೂ ಇದ್ದವು. ಆದರೆ, ಪರೀಕ್ಷೆ ವರದಿಯು ನೆಗೆಟಿವ್‌ ಬಂದಿದೆ. ಇದರಿಂದ ಸ್ವಲ್ಪ ಮಟ್ಟಿನ ಸಮಾಧಾನವಾಗಿದೆ’ ಎಂದರು.

‘ಪ್ರಸ್ತುತ 48 ಮಂದಿಗೆ ಸೋಂಕು ತಗುಲುವ ಸಾಧ್ಯತೆ ಅತಿ ಹೆಚ್ಚಿದ್ದು, ಅವರನ್ನು ವೈದ್ಯಕೀಯ ಕಾಲೇಜಿನ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇನ್ನೂ, ಐದು ಮಾದರಿಗಳನ್ನು ಪರೀಕ್ಷಿಸಲಾಗುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.

ಈ 48 ಮಂದಿಯಲ್ಲಿ ಕೋಯಿಕ್ಕೋಡ್‌ (31), ವಯನಾಡ್‌ (4), ಮಲಪ್ಪುರಂ(8), ಕಣ್ಣೂರು(3), ಪಾಲಕ್ಕಾಡ್‌ (1), ಎರ್ನಾಕುಲಂ(1) ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ.

‘ಮಂಗಳವಾರ ಇನ್ನಷ್ಟು ಮಾದರಿಗಳನ್ನು ಪರೀಕ್ಷಿಸಲಾಗುವುದು’ ಎಂದು ವೀಣಾ ಜಾರ್ಜ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT