ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದ ಅಮರನಾಥ ಗುಹೆ ಸಮೀಪ ಮೇಘ ಸ್ಫೋಟ

Last Updated 28 ಜುಲೈ 2021, 15:28 IST
ಅಕ್ಷರ ಗಾತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದ ಹಿಮಾಲಯ ಪರ್ವತ ಪ್ರದೇಶದಲ್ಲಿರುವ ಪವಿತ್ರ ಅಮರನಾಥ ಗುಹಾ ದೇವಾಲಯದ ಸಮೀಪ ಮೇಘ ಸ್ಫೋಟ ಉಂಟಾಗಿದೆ. ಬುಧವಾರದ ಈ ಘಟನೆಯಲ್ಲಿ ಯಾವುದೇ ಸಾವು–ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಧ್ಯಾಹ್ನ ಪರ್ವತದ ಮೇಲ್ಭಾಗದಿಂದ ಬಂಡೆಕಲ್ಲುಗಳು ಸಿಡಿದು ನೀರು ನುಗ್ಗಿದ್ದು, ಕೆಲವು ಟೆಂಟ್‌ಗಳಿಗೆ ಹಾನಿಯಾಗಿದೆ. ಆದರೆ, ಪ್ರಾಣಾಪಾಯವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಗಾಲೇ ರಾಜ್ಯ ವಿಪತ್ತು ನಿರ್ವಹಣಾ ಪಡೆಯು (ಎಸ್‌ಡಿಆರ್‌ಎಫ್‌) ಎರಡು ತಂಡಗಳನ್ನು ಅಮರನಾಥ ಗುಹೆ ಸಮೀಪ ನಿಯೋಜಿಸಲಾಗಿದೆ ಹಾಗೂ ಹೆಚ್ಚುವರಿ ತಂಡಗಳನ್ನು ಗಂದರ್ಬಲ್‌ ಜಿಲ್ಲೆಯಿಂದ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್‌ ಜಿಲ್ಲೆಯಲ್ಲಿ ಬುಧವಾರ ಮೇಘ ಸ್ಫೋಟದಿಂದ ಉಂಟಾದ ದಿಢೀರ್‌ ಪ್ರವಾಹದಿಂದಾಗಿ 7 ಮಂದಿ ಸಾವಿಗೀಡಾಗಿದ್ದು, 25ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದಲ್ಲಿ ಆರು ಮನೆಗಳು ಕೊಚ್ಚಿ ಹೋಗಿವೆ ಎಂದು ಜಿಲ್ಲಾ ಅಭಿವೃದ್ಧಿ ಆಯುಕ್ತ ಅಶೋಕ್‌ ಕುಮಾರ್‌ ಶರ್ಮಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT