ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಲಬ್‌ ಹೌಸ್‌ನಲ್ಲಿ ಮಾತು ಸೋರಿಕೆ: ಸೈಬರ್ ಸೆಲ್‌ಗೆ ದಿಗ್ವಿಜಯ್ ದೂರು

Last Updated 28 ಜೂನ್ 2021, 14:43 IST
ಅಕ್ಷರ ಗಾತ್ರ

ಭೋಪಾಲ್: ಕ್ಲಬ್ ಹೌಸ್‌ನಲ್ಲಿ ತಮ್ಮ ಮಾತುಗಳು ಸೋರಿಕೆಯಾಗಿವೆ ಎಂದು ಆರೋಪಿಸಿ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಅವರು ಸೋಮವಾರ ಮಧ್ಯಪ್ರದೇಶದ ಸೈಬರ್ ಸೆಲ್‌ಗೆ ದೂರು ನೀಡಿದ್ದಾರೆ.

‘ಕ್ಲಬ್‌ ಹೌಸ್‌ನಲ್ಲಿ ಜಮ್ಮು–ಕಾಶ್ಮೀರದ ಕುರಿತು ನಾನು ಆಡಿದ ಮಾತುಗಳನ್ನು ಸಂಗ್ರಹಿಸಿ, ವಿರೂಪಗೊಳಿಸಿ ಹಂಚಿಕೊಳ್ಳಲಾಗಿದೆ. ಈ ಸಂಬಂಧ ಮಧ್ಯಪ್ರದೇಶದ ಸೈಬರ್ ಸೆಲ್‌ಗೆ ಮಾಹಿತಿ ತಂತ್ರಜ್ಞಾನ ಕಾಯ್ದೆ (ಐಟಿ) ಅಡಿಯಲ್ಲಿ ದೂರು ದಾಖಲಿಸಿದ್ದೇನೆ’ ಎಂದು ದಿಗ್ವಿಜಯ್ ಸುದ್ದಿಗಾರರಿಗೆ ತಿಳಿಸಿದರು.

‘ಕ್ಲಬ್ ಹೌಸ್‌ನ ಮಾತುಗಳನ್ನು ಹಂಚಿಕೊಂಡ ಮತ್ತು ಪೋಸ್ಟ್ ಅನ್ನು ಮರು ಟ್ವೀಟ್ ಮಾಡಿದವರ ವಿರುದ್ಧವೂ ಎಫ್‌ಐಆರ್ ದಾಖಲಿಸಲಾಗುವುದು. ಕ್ಲಬ್ ಹೌಸ್‌ ಆ್ಯಪ್‌ನ ಸಂಬಂಧ ಪಟ್ಟವರಿಗೂ ಕಾನೂನು ಪ್ರಕಾರ ನೋಟಿಸ್ ನೀಡುತ್ತೇನೆ. ಈಗಾಗಲೇ ಟ್ವಿಟರ್‌ಗೆ ನೋಟಿಸ್ ಕಳುಹಿಸಿದ್ದೇನೆ’ ಎಂದು ಅವರು ವಿವರಿಸಿದರು.

‘ದಿಗ್ವಿಜಯ್ ಸಿಂಗ್ ಅವರು ಐಟಿ ಕಾಯ್ದೆ ಅಡಿಯಲ್ಲಿ ದೂರು ನೀಡಿದ್ದಾರೆ. ಆದರೆ, ಇದುವರೆಗೆ ಯಾರ ವಿರುದ್ಧವೂ ಪ್ರಕರಣ ದಾಖಲಾಗಿಲ್ಲ’ ಎಂದು ಮಧ್ಯಪ್ರದೇಶದ ಸೈಬರ್ ಸೆಲ್ ಸೂಪರಿಂಟೆಂಡೆಂಟ್ ಗುರ್‌ಕರಣ್ ಸಿಂಗ್ ಅವರು ಮಾಹಿತಿ ನೀಡಿದ್ದಾರೆ.

‘ತನಿಖೆಯ ನಂತರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಪೊಲೀಸರು ಮಾಹಿತಿ ಪಡೆಯಲಿದ್ದಾರೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT