ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಾವು ಮಾಡಿರುವ ತಪ್ಪುಗಳನ್ನು ಮರೆಮಾಚಲು ಮತ್ತು ತಮ್ಮ ಕಳಪೆ ಪ್ರಚಾರಕ್ಕಾಗಿ ಸರ್ಕಾರದ ಬಜೆಟ್‌ನಲ್ಲಿ ಗದ್ದಲವನ್ನು ಸೃಷ್ಟಿಸಿದ್ದಾರೆ ಎಂದು ದೆಹಲಿ ಬಿಜೆಪಿ ಘಟಕ ಆರೋಪಿಸಿದೆ.
ನಗರಾಡಳಿತ ಎದುರಿಸುತ್ತಿರುವ ಭ್ರಷ್ಟಾಚಾರದ ಆರೋಪದಿಂದ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕೇಜ್ರಿವಾಲ್ ಆರೋಪ ಮಾಡುತ್ತಿದ್ದಾರೆ ಎಂದು ದೆಹಲಿ ಬಿಜೆಪಿ ಕಾರ್ಯಾಧ್ಯಕ್ಷ ವೀರೇಂದ್ರ ಸಚ್‌ದೇವ್ ತಿಳಿಸಿದ್ದಾರೆ.
‘ಬಜೆಟ್ ನಿಲ್ಲಿಸಲು ಕೇಂದ್ರ ಕಾರಣ ಎಂದು ಆರೋಪ ಮಾಡುವ ಬದಲು ಮೂರು ದಿನಗಳಿಂದ ಗೃಹಸಚಿವಾಲಯ ಕೇಳಿರುವ ಮಾಹಿತಿಗೆ ದೆಹಲಿ ಸರ್ಕಾರ ಸ್ಪಷ್ಟೀಕರಣ ನೀಡಲಿ’ ಎಂದು ಸಚ್‌ದೇವ್ ಆಗ್ರಹಿಸಿದರು.
ತಮ್ಮ ಸರ್ಕಾರದ ಬಜೆಟ್ ಮಂಡನೆಯನ್ನು ಕೇಂದ್ರ ಸರ್ಕಾರ ನಿಲ್ಲಿಸಿದೆ ಎಂದು ಕೇಜ್ರಿವಾಲ್ ಸೋಮವಾರ ಆರೋಪಿಸಿದ್ದಾರೆ.
ಮಂಗಳವಾರ ವಿಧಾನಸಭೆಯಲ್ಲಿ ಮಂಡನೆಯಾಗಬೇಕಿದ್ದ ದೆಹಲಿ ಬಜೆಟ್‌ಗೆ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯಬೇಕಿದೆ. 75 ವರ್ಷಗಳಲ್ಲಿ ರಾಜ್ಯವೊಂದರ ಬಜೆಟ್ ಅನ್ನು ನಿಲ್ಲಿಸಿರುವುದು ಇದೇ ಮೊದಲು ಎಂದು ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರಿಗೆ ಪತ್ರವನ್ನು ಬರೆದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.