ಪಂಜಾಬ್: ಹೊಸದಾಗಿ 400 ಮೊಹಲ್ಲಾ ಕ್ಲಿನಿಕ್ ಆರಂಭ

ಅಮೃತಸರ: ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿ ಆಮ್ ಆದ್ಮಿ ಪಕ್ಷದಿಂದ ರಾಜ್ಯಕ್ಕೆ ಹೊಸದಾಗಿ 400 ‘ಮೊಹಲ್ಲಾ ಕ್ಲಿನಿಕ್‘ಗಳಿಗೆ ಶುಕ್ರವಾರ ಚಾಲನೆ ನೀಡಿದರು.
ಈ ಮೂಲಕ ರಾಜ್ಯದಲ್ಲಿ ಮೊಹಲ್ಲಾ ಕ್ಲಿನಿಕ್‌ಗಳ ಸಂಖ್ಯೆ 500ಕ್ಕೇರಿದೆ.
10 ತಿಂಗಳಲ್ಲಿ 500 ಕ್ಲಿನಿಕ್‌ಗಳನ್ನು ಆರಂಭಿಸಿರುವುದು ಖುಷಿಯ ಸಂಗತಿ. ಮುಂದಿನ ದಿನಗಳಲ್ಲಿ ಇಂತಹ ಇನ್ನಷ್ಟು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಪಂಜಾಬ್ ಆರೋಗ್ಯ ಸಚಿವ ಬಲಬೀರ್ ಸಿಂಗ್ ಮತ್ತು ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.